ದೇಶ

ವಿರಾಟ್‌ ಸೇರಿ ಭಾರತದ ಕ್ರಿಕೆಟ್‌ ತಾರೆಯರಿಂದ ನ್ಯೂ ಇಯರ್‌ ಸೆಲೆಬ್ರೇಷನ್‌

ಮಾಜಿ ಕ್ರಿಕೆಟಿಗರಾದ ಯುವರಾಜ್ ಸಿಂಗ್, ಇರ್ಫಾನ್ ಪಠಾಣ್, ರವಿಶಾಸ್ತ್ರಿ, ಟೀಮ್ ಇಂಡಿಯಾ ಮುಖ್ಯ ಕೋಚ್ ಗೌತಮ್ ಗಂಭೀರ್ ಕೂಡ ನ್ಯೂ ಇಯರ್‌ಗೆ ಶುಭಾಶಯ ತಿಳಿಸಿದ್ಧಾರೆ.. ಆಪ್ತರ ಜೊತೆ ಹೊಸ ವರ್ಷಾಚರಣೆಯಲ್ಲಿ ಭಾಗಿಯಾಗಿದ್ದಾರೆ.

ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ವಿರಾಟ್‌ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ ಸೇರಿ ಆಪ್ತರ ಜೊತೆ ನ್ಯೂ ಇಯರ್‌ ಸೆಲೆಬ್ರೇಷನ್‌ ಮಾಡಿದ್ದಾರೆ.. ಭಾರತದ ಸ್ಟಾರ್‌ ಕ್ರಿಕೆಟರ್‌ ವಿರಾಟ್‌ ಕೊಹ್ಲಿ ಸಿಡ್ನಿಯ ರೆಸ್ಟೋರೆಂಟ್‌ಗೆ ಸಂಭ್ರಮಾಚರಣೆ ತೆರಳುತ್ತಿರುವ ವಿಡಿಯೋ ವೈರಲ್‌ ಆಗಿದೆ. ಕಿಂಗ್‌ ಕೊಹ್ಲಿಯ ಹೊಸ ವರ್ಷ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ಕನ್ನಡಿಗರಾದ ದೇವದತ್ತ ಪಡಿಕ್ಕಲ್‌ ಮತ್ತು ಪ್ರಸಿದ್ಧ್‌ ಕೃಷ್ಣ ಕೂಡ ಪಾಲ್ಗೊಂಡಿದ್ದರು.

ಇಷ್ಟೇ ಅಲ್ಲದೇ ಮಾಜಿ ಕ್ರಿಕೆಟಿಗರಾದ ಯುವರಾಜ್ ಸಿಂಗ್, ಇರ್ಫಾನ್ ಪಠಾಣ್, ರವಿಶಾಸ್ತ್ರಿ, ಟೀಮ್ ಇಂಡಿಯಾ ಮುಖ್ಯ ಕೋಚ್ ಗೌತಮ್ ಗಂಭೀರ್ ಕೂಡ ನ್ಯೂ ಇಯರ್‌ಗೆ ಶುಭಾಶಯ ತಿಳಿಸಿದ್ಧಾರೆ.. ಆಪ್ತರ ಜೊತೆ ಹೊಸ ವರ್ಷಾಚರಣೆಯಲ್ಲಿ ಭಾಗಿಯಾಗಿದ್ದಾರೆ.