ವೈರಲ್

ಚರಂಡಿಯಲ್ಲಿ ನವಜಾತ ಶಿಶು ಪತ್ತೆ..ರಕ್ಷಣೆ ಮಾಡಿದ ಆಶಾ ಕಾರ್ಯಕರ್ತೆಯರು..!

ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ತಾಲೂಕಿನ ರಾಜೇಗೌಡನಹುಂಡಿ ಗ್ರಾಮದಲ್ಲಿ, ಚರಂಡಿಯೊಂದರಲ್ಲಿ ಗಂಡು ಮಗು ಪತ್ತೆಯಾಗಿದೆ.

ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ತಾಲೂಕಿನ ರಾಜೇಗೌಡನಹುಂಡಿ ಗ್ರಾಮದಲ್ಲಿ, ಚರಂಡಿಯೊಂದರಲ್ಲಿ ಗಂಡು ಮಗು ಪತ್ತೆಯಾಗಿದೆ. ಆಗ ತಾನೇ ಜನಿಸಿದ ಶಿಶುವನ್ನು ಚರಂಡಿಗೆಸೆದಿದ್ದು, ಮಗು ಅಳುವ ಶಬ್ದ ಕೇಳಿ ಆಶಾ ಕಾರ್ಯಕರ್ತೆಯರು ದೌಡಾಯಿಸಿದ್ದಾರೆ. ಮಗುವನ್ನು ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರಿಸಿದ್ದಾರೆ. ಜೊತೆಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಮಗುವು ಅಕ್ರಮ ಸಂಬಂಧದಿಂದ ಜನಿಸಿರುವ ಶಂಕೆ ವ್ಯಕ್ತವಾಗಿದೆ.