ಕರ್ನಾಟಕ

ವರದಕ್ಷಿಣೆ ಕಿರುಕುಳಕ್ಕೆ ನವವಿವಾಹಿತೆ ಬಲಿ: ಪ್ರೀತಿಸಿ ಮದುವೆಯಾಗಿದ್ದ ಗಂಡನಿಂದಲೇ ಕಿರುಕುಳ

ಪ್ರೀತಿಸಿ ಮದುವೆಯಾಗಿದ್ದ ಗಂಡನಿಂದಲೇ ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ನವವಿವಾಹಿತೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಗುಮ್ಮನಹಳ್ಳಿಯಲ್ಲಿ ನಡೆದಿದೆ.

ಚಿಕ್ಕಬಳ್ಳಾಪುರ: ಪ್ರೀತಿಸಿ ಮದುವೆಯಾಗಿದ್ದ ಗಂಡನಿಂದಲೇ ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ನವವಿವಾಹಿತೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಗುಮ್ಮನಹಳ್ಳಿಯಲ್ಲಿ ನಡೆದಿದೆ.

ರೂಪಾ (29) ಮೃತ ದುರ್ದೈವಿಯಾಗಿದ್ದು. 2 ವರ್ಷಗಳ ಹಿಂದೆಯಷ್ಟೇ ಸುರೇಶ್‌ ಎಂಬಾತನನ್ನ ರೂಪಾ ಪ್ರೀತಿಸಿ ಮದುವೆಯಾಗಿದ್ದಳು. ರೂಪಾ ಕುಟುಂಬದವರು ಸುರೇಶ್‌ನೊಂದಿಗೆ ಮದುವೆ ಮಾಡಿಸಿದ್ದರು. ಸುರೇಶ್‌ ಸಾಸಲು ಪಂಚಾಯಿತಿಯಲ್ಲಿ ಡಾಟಾ ಎಂಟ್ರಿ ಆಪರೇಟಿಂಗ್ ಆಗಿ ಕೆಲಸ ಮಾಡುತ್ತಿದ್ದ.  ಮದುವೆ ಸಮಯದಲ್ಲಿ 100 ಗ್ರಾಂ ಒಡವೆ ಸಹ ನೀಡಿದ್ದರು.

ಆದ್ರೆ ಸುರೇಶ್‌ ಕುಟುಂಬಸ್ಥರು ಮದುವೆಗೆ ಲಕ್ಷಾಂತರ ರೂಪಾಯಿ ಖರ್ಚು ಮಾಡಿದ್ದೇವೆ. ಆ ಹಣವನ್ನು ತೆಗೆದುಕೊಂಡು ಬಾ ಎಂದು ರೂಪಾಗೆ ಕಿರುಕುಳ ನೀಡುತ್ತಿದ್ದರು. ಕಿರುಕುಳಕ್ಕೆ ಬೇಸತ್ತ ರೂಪಾ ಸಾವಿಗೂ ಮುನ್ನ ರೂಪಾ ಡೆತ್‌ ನೋಟ್‌ ಬರೆದಿಟ್ಟು, ಅದರಲ್ಲಿ ನನ್ನ ಸಾವಿಗೆ ಗಂಡ ಸುರೇಶ್, ಮಾವ ನರಸಿಂಹಮೂರ್ತಿ ಅತ್ತೆ ದೇವಮ್ಮ ಕಾರಣ ಎಂದು ಬರೆದಿದ್ದಾರೆ. 

ಸದ್ಯ ದೊಡ್ಡಬೆಳವಂಗಲ ಪೊಲೀಸ್‌ ಠಾಣೆಯಲ್ಲಿ ವರದಕ್ಷಿಣೆ ಕಿರುಕುಳ ಆರೋಪದ ಮೇಲೆ ಪ್ರಕರಣ ದಾಖಲಾಗಿದೆ. ಆರೋಪಿ ಸುರೇಶ್‌ನನ್ನು ವಶಕ್ಕೆ ಪಡೆದಿರುವ ಪೊಲೀಸರು ತಲೆಮರಿಸಿಕೊಂಡಿರುವ ಸುರೇಶ್‌ ತಂದೆ ತಾಯಿಗಾಗಿ ಶೋಧ ನಡೆಸಿದ್ದಾರೆ.