ಕರ್ನಾಟಕ

ಚನ್ನಪಟ್ಟಣ ಬೈ ಎಲೆಕ್ಷನ್​: ಅಭ್ಯರ್ಥಿ ಬಗ್ಗೆ ನಿಖಿಲ್ ಕುಮಾರಸ್ವಾಮಿ ಹೇಳಿಕೆ..!

ಚನ್ನಪಟ್ಟಣದಲ್ಲಿ ಎನ್‌ಡಿಎ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸುತ್ತೇವೆ. ಕಾಂಗ್ರೆಸ್ಸನ್ನು ಅಧಿಕಾರದಿಂದ ದೂರ ಇಡಲು ಪ್ರಯತ್ನಿಸುತ್ತೇವೆ. ನಮ್ಮ ಬಿಜೆಪಿ ನಡುವೆ ಉತ್ತಮ ಹೊಂದಾಣಿಕೆ ಇದೆ. ರಾಜ್ಯದ ಜನ ಕೂಡಾ ಇದನ್ನ ಒಪ್ಪಿದ್ದಾರೆ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದರು.

ಚನ್ನಪಟ್ಟಣ ಉಪಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಯಾರು ಎಂಬ ಚರ್ಚೆ ರಾಜ್ಯದಲ್ಲಿ ಬಾರಿ ಸುದ್ದಿಯಾಗುತ್ತಿದೆ. ಅದರಲ್ಲೂ ಸಿ.ಪಿ ಯೋಗೆಶ್ವರ್ ಹಾಗೂ ನಿಖಿಲ್ ಕುಮಾರಸ್ವಾಮಿ ನಡುವೆ ಟಿಕೆಟ್ ಗಾಗಿ ಕೇಂದ್ರದಲ್ಲಿ ಚರ್ಚೆಯಾಗುತ್ತಿರುವುದು ಎಲ್ಲರಿಗೂ ತಿಳಿದ ವಿಚಾರ. ಈ ಮಧ್ಯ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಚನ್ನಪಟ್ಟಣ ಉಪಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಯನ್ನು ನಿಲ್ಲಿಸಲಾಗುವುದು. ಅಭ್ಯರ್ಥಿ ಗೆಲುವಿಗೆ ಶ್ರಮಿಸುವೆ ಎಂದು ಹೇಳಿದರು. 

ನಾವು ಬಿಜೆಪಿ ಜೊತೆ ಸಖ್ಯ ಬೆಳೆಸಿದ್ದೇವೆ ಎಂದ ಮಾತ್ರಕ್ಕೆ ನಮ್ಮ ತತ್ವ ಸಿದ್ಧಾತಂತಗಳನ್ನು ನಾವು ಮಾರಿಕೊಂಡಿಲ್ಲ. ನಾವು ಎಲ್ಲಾ ಸಮುದಾಯದವರಿಗೂ ನಾವು ಅನುಕೂಲ ಮಾಡಿಕೊಟ್ಟಿದ್ದೇವೆ. ದೇವೇಗೌಡರು ಮುಸಲ್ಮಾನ ಸಮುದಾಯದವರಿಗೂ ಮೀಸಲಾತಿ ತಂದು ಕೊಟ್ಟವರು. ನಾವು ಎಲ್ಲಾ ಸಮುದಾಯದವರ ಏಳಿಗೆಗೆ ದುಡಿಯುತ್ತೇವೆ' ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದರು. ಚನ್ನಪಟ್ಟಣದಲ್ಲಿ ಎನ್‌ಡಿಎ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸುತ್ತೇವೆ. ಕಾಂಗ್ರೆಸ್ಸನ್ನು ಅಧಿಕಾರದಿಂದ ದೂರ ಇಡಲು ಪ್ರಯತ್ನಿಸುತ್ತೇವೆ. ನಮ್ಮ ಬಿಜೆಪಿ ನಡುವೆ ಉತ್ತಮ ಹೊಂದಾಣಿಕೆ ಇದೆ. ರಾಜ್ಯದ ಜನ ಕೂಡಾ ಇದನ್ನ ಒಪ್ಪಿದ್ದಾರೆ. ಮುಂದೆಯೂ ಕೂಡ ನಮ್ಮ ಮೈತ್ರಿ ಮುಂದುವರೆಯುತ್ತದೆ ಎಂದರು.