ವೈರಲ್

ನಿಖಿಲ್ ಸೋಲು..ಅಭಿಮಾನಿ ಆತ್ಮಹತ್ಯೆಗೆ ಯತ್ನ..!

ಚನ್ನಪಟ್ಟಣ ಉಪಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಸೋಲುಂಡ ಕಾರಣ, ಅವರ ಅಭಿಮಾನಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಚನ್ನಪಟ್ಟಣ ಉಪಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಸೋಲುಂಡ ಕಾರಣ, ಅವರ ಅಭಿಮಾನಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ರಾಮನಗರ ಜಿಲ್ಲೆ ಚನ್ನಪಟ್ಟಣದ ಕುಡ್ಲೂರು ಬಳಿಯ ಶ್ರೀರಾಂಪುರ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ ಮಂಜುನಾಥ್ ಎನ್ನಲಾಗಿದೆ. 

ಅಲ್ಲದೇ ಪತ್ರದಲ್ಲಿ ನನ್ನ ಸಾವಿಗೆ ನಾನೇ ಕಾರಣ. ನಾನು ನಿಖಿಲ್ ಅವರ ಅಭಿಮಾನಿ. ಜೈ ಜೆಡಿಎಸ್, ಜೈ ಎನ್ಡಿಎ ಎಂದು ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅಸ್ವಸ್ಥನನ್ನ ಮಂಡ್ಯ ಮಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದು, ಸದ್ಯ ಪ್ರಾಣಪಾಯದಿಂದ ಪಾರಾಗಿದ್ದಾರೆ.