ಕರ್ನಾಟಕ
ಡಿಕೆಶಿ ಅವರ ಸಂಸ್ಕೃತಿಗೆ ತಕ್ಕಂತೆ ಮಾತಾಡ್ತಾರೆ; ನಿಖಿಲ್ ಕುಮಾರಸ್ವಾಮಿ
ಡಿಸಿಎಂ ಡಿಕೆಶಿ ಅವರ ಸಂಸ್ಕೃತಿ ಹಾಗೂ ಹಿನ್ನೆಲೆಗೆ ತಕ್ಕಂತೆ ಮಾತಾಡ್ತಾರೆ. ನಾನು ಅದ್ಯಾವುದಕ್ಕೂ ಮಾತಾಡಲ್ಲ ಎಂದು ನಿಖಿಲ್ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.
ಚನ್ನಪಟ್ಟಣದಲ್ಲಿ ಪ್ರಚಾರದ ಅಖಾಡಕ್ಕಿಳಿದಿರುವ ನಿಖಿಲ್ ಕುಮಾರಸ್ವಾಮಿ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ನಡುವೆ ವಾಕ್ಸಮರ ಜೋರಾಗಿದೆ. ಪ್ರಚಾರದ ವೇಳೆ ಡಿಕೆಶಿ ಹೇಳಿಕೆಗೆ ನಿಖಿಲ್ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ಡಿಸಿಎಂ ಡಿಕೆಶಿ ಅವರ ಸಂಸ್ಕೃತಿ ಹಾಗೂ ಹಿನ್ನೆಲೆಗೆ ತಕ್ಕಂತೆ ಮಾತಾಡ್ತಾರೆ. ನಾನು ಅದ್ಯಾವುದಕ್ಕೂ ಮಾತಾಡಲ್ಲ ಎಂದು ನಿಖಿಲ್ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.
ನಮ್ಮದು ಅಭಿವೃದ್ಧಿ ರಾಜಕಾರಣ. ಎದುರಾಳಿಗಳ ಸ್ಟಾಟರ್ಜಿ ಏನೇ ಆಗಿರಲಿ ನಾನು ಯಾವುದಕ್ಕೂ ಪ್ರವೋಕ್ ಆಗೋದಿಲ್ಲ. ಜೆಡಿಎಸ್ ಮತ್ತು ಬಿಜೆಪಿ ಪಕ್ಷದ ಮುಖಂಡರು ನನ್ನ ಜತೆ ಹೆಜ್ಜೆ ಹಾಕ್ತಿದ್ದಾರೆ.ಯಡಿಯೂರಪ್ಪ ಅವರೆ ನನ್ನ ಹೆಸರು ಘೋಷಣೆ ಮಾಡಿದ್ದಾರೆ. ದೇವೆಗೌಡರು ನಾಳೆಯಿಂದ ಗ್ರಾಮಪಂಚಾಯತಿ ಮಟ್ಟದಿಂದ ಪ್ರಚಾರ ಮಾಡಬೇಕಿತ್ತು. ಆದರೆ ಆರೋಗ್ಯ ಸ್ವಲ್ಪ ಸರಿ ಇಲ್ಲ ಎಂದು ತಿಳಿಸಿದರು.