ಕರ್ನಾಟಕ

ಯತ್ನಾಳ್ ಮೇಲೆ ಯಾವುದೇ ಶಿಸ್ತು ಕ್ರಮವಾಗಲ್ಲ: ಶ್ರೀರಾಮುಲು

ಯಾರೇ ಹೇಳಿದರೂ ವಿಜಯೇಂದ್ರರನ್ನು ಕೆಳಗಿಳಿಸಲು ಆಗಲ್ಲ, ಒಂದು ಸಾರಿ ಅಧ್ಯಕ್ಷರಾದರೆ ಎಲ್ಲರೂ ಒಪ್ಪಿಕೊಳ್ಳಲೇಬೇಕು ಎಂದು ಮಾಜಿ ಸಚಿವ ಶ್ರೀರಾಮುಲು , ಬಿವೈ ವಿಜಯೇಂದ್ರ ಪರ ಬ್ಯಾಟಿಂಗ್ ಮಾಡಿದ್ದಾರೆ.

ಬೀದರ್: ಯಾರೇ ಹೇಳಿದರೂ ವಿಜಯೇಂದ್ರರನ್ನು ಕೆಳಗಿಳಿಸಲು ಆಗಲ್ಲ, ಒಂದು ಸಾರಿ ಅಧ್ಯಕ್ಷರಾದರೆ ಎಲ್ಲರೂ ಒಪ್ಪಿಕೊಳ್ಳಲೇಬೇಕು ಎಂದು ಮಾಜಿ ಸಚಿವ ಶ್ರೀರಾಮುಲು , ಬಿವೈ ವಿಜಯೇಂದ್ರ ಪರ ಬ್ಯಾಟಿಂಗ್ ಮಾಡಿದ್ದಾರೆ.

ಬೀದರ್ ಜಿಲ್ಲೆಯಲ್ಲಿ ಮಾತನಾಡಿದ ಅವರು, ಬಿಜೆಪಿಯಲ್ಲಿ ಈಗ ಎರಡು ಬಣಗಳು ಇರಬಹುದು. ಆದರೆ ಎಲ್ಲಾ ಭಿನ್ನಮತವನ್ನು ಹೈಕಮಾಂಡ್ ಸರಿಪಡಿಸುತ್ತದೆ. ಯತ್ನಾಳ್ ಮೇಲೆ ಯಾವುದೇ ಶಿಸ್ತು ಕ್ರಮವಾಗಲ್ಲ. ಯಾಕೆಂದರೆ ಅವರು ವೈಯಕ್ತಿಕ ಹೋರಾಟ ಮಾಡುತ್ತಿಲ್ಲ. ಹೀಗಾಗಿ ಯತ್ನಾಳ್ ಉಚ್ಚಾಟನೆ ಪ್ರಶ್ನೆ ಇಲ್ಲ ಎಂದು ತೇಪೆ ಹಾಕಿದರು.