ಕರ್ನಾಟಕ

ಇನ್ಮುಂದೆ 5 ಕೆಜಿ ಅಕ್ಕಿಯ ಹಣ ಬಂದ್.. ಸಂಪೂರ್ಣ ಅಕ್ಕಿ ವಿತರಣೆ

ಕೇಂದ್ರ ಸರ್ಕಾರದಿಂದ ಅಕ್ಕಿ ಲಭ್ಯವಿರುವ ಹಿನ್ನೆಲೆಯಲ್ಲಿ ಹೆಚ್ಚುವರಿಯಾಗಿ 5 ಕೆ.ಜಿ ಅಕ್ಕಿಯನ್ನು ಒಎಂಎಸ್ಎಸ್(OMSS) ಯೋಜನೆಯಡಿಯಲ್ಲಿ ಕೇಂದ್ರ ಸರ್ಕಾರದಿಂದ ಖರೀದಿಸಿ -2025 ಮಾಹೆಯಿಂದ ಯೋಜನೆಯಡಿ ಅಕ್ಕಿಯನ್ನು ವಿತರಿಸಲು ತೀರ್ಮಾನಿಸಿದೆ.

ಬೆಂಗಳೂರು: ಅನ್ನಭಾಗ್ಯ ಅಕ್ಕಿ ವಿಚಾರದಲ್ಲಿ ಸರ್ಕಾರ ಮಹತ್ವದ ನಿರ್ಧಾರವನ್ನ ತೆಗೆದುಕೊಂಡಿದೆ. ಇನ್ನು ಮುಂದೆ ಹಣದ ಬದಲಾಗಿ ಅಕ್ಕಿಯನ್ನೇ ನೀಡಲು ಸರ್ಕಾರ ತೀರ್ಮಾನಿಸಿದೆ. 

ರಾಜ್ಯ ಸರ್ಕಾರ ಅನ್ನಭಾಗ್ಯ ಯೋಜನೆಯಡಿ ಅಂತ್ಯೋದಯ ಹಾಗೂ ಬಿಪಿಎಲ್ ಕಾರ್ಡ್ ಫಲಾನುಭವಿಗಳಿಗೆ ತಲಾ 10 ಕೆಜಿ ಅಕ್ಕಿ ನೀಡುವ ಬದಲು, ಐದು ಕೆಜಿ ಅಕ್ಕಿಯನ್ನು ನೀಡಿ,  ಉಳಿದ 5ಕೆಜಿ ಬದಲಿಗೆ ಪ್ರತಿ ತಿಂಗಳು 170 ರೂಪಾಯಿ ಹಣವನ್ನು ಫಲಾನುಭವಿಯ ಖಾತೆಗೆ ಜಮೆ ಮಾಡುತ್ತಿತ್ತು. ಆದರೀಗ ರಾಜ್ಯ ಸರ್ಕಾರ ಹಣದ ಬದಲಿಗೆ ಪ್ರತಿ ಫಲಾನುಭವಿಗೆ 10 ಕೆಜಿ ಅಕ್ಕಿಯನ್ನು ನೀಡಲು ನಿರ್ಧರಿಸಿದೆ.

ಸರ್ಕಾರದ ಪ್ರಕಟಣೆಯಲ್ಲೇನಿದೆ?
ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಮಹತ್ವದ ಅನ್ನಭಾಗ್ಯ ಯೋಜನೆಯಡಿ ಪ್ರತಿ ಫಲಾನುಭವಿಗೆ 10 ಕೆ.ಜಿ ಅಕ್ಕಿಯನ್ನು ವಿತರಿಸಲು ಚುನಾವಣೆಯ ಸಂದರ್ಭದಲ್ಲಿ ಘೋಷಣೆ ಮಾಡಲಾಗಿತ್ತು. ನಂತರದ ದಿನಗಳಲ್ಲಿ ಅಕ್ಕಿ ಲಭ್ಯವಾಗದ ಕಾರಣ ನಮ್ಮ ಸರ್ಕಾರ ಸಾರ್ವಜನಿಕರಿಗೆ ಕೊಟ್ಟ ಮಾತಿನಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ನಮ್ಮ ಸರ್ಕಾರ ನುಡಿದಂತೆ ನಡೆಯುತ್ತಿದೆ. ಪ್ರತಿ ಫಲಾನುಭವಿಗೆ 5 ಕೆ.ಜಿ ಅಕ್ಕಿಯ ಜೊತೆಗೆ ಉಳಿದ 5 ಕೆ.ಜಿ ಅಕ್ಕಿಗೆ ರೂ. 170 ರಂತೆ ನೇರ ನಗದು ವರ್ಗಾವಣೆ ಮಾಡುತ್ತಿದೆ.

ಕೇಂದ್ರ ಸರ್ಕಾರದಿಂದ ಅಕ್ಕಿ ಲಭ್ಯವಿರುವ ಹಿನ್ನೆಲೆಯಲ್ಲಿ ಹೆಚ್ಚುವರಿಯಾಗಿ 5 ಕೆ.ಜಿ ಅಕ್ಕಿಯನ್ನು ಒಎಂಎಸ್ಎಸ್(OMSS) ಯೋಜನೆಯಡಿಯಲ್ಲಿ ಕೇಂದ್ರ ಸರ್ಕಾರದಿಂದ ಖರೀದಿಸಿ -2025 ಮಾಹೆಯಿಂದ ಯೋಜನೆಯಡಿ ಅಕ್ಕಿಯನ್ನು ವಿತರಿಸಲು ತೀರ್ಮಾನಿಸಿದೆ.
-ಕೆ.ಹೆಚ್. ಮುನಿಯಪ್ಪ
(ಮಾನ್ಯ ಸಚಿವರು, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ)