ಕರ್ನಾಟಕ

ವಿಜಯೇಂದ್ರ ಮಾತ್ರವಲ್ಲ ಅವರ ತಂದೆಯೂ ನನ್ನ ಬಳಿ ಬಂದಿದ್ರು : ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಈ ರಾಜ್ಯದ ಉಪಮುಖ್ಯಮಂತ್ರಿ. ಈ ಹಿಂದೆ ಯಡಿಯೂರಪ್ಪನವರು ಅವರ ಕ್ಷೇತ್ರದ ಕೆಲಸಗಳ ಕುರಿತು ಒಂದಷ್ಟು ಪತ್ರಗಳಿಗೆ ಸಹಿ ಹಾಕಿಸಿಕೊಂಡು ಹೋಗಿದ್ದರು" ಎಂದು ಹೇಳಿದ್ದಾರೆ. ಆ ಮೂಲಕ, ಯತ್ನಾಳ್ ಆರೋಪಿಸಿರುವ ವಿದ್ಯಮಾನದಲ್ಲಿ ಮುಚ್ಚುಮರೆಯಿಲ್ಲ ಎಂದು ಹೇಳಿದ್ದಾರೆ.

ಬೆಂಗಳೂರು : ಕೆಪಿಸಿಸಿ ಅಧ್ಯಕ್ಷರು ಹಾಗೂ ರಾಜ್ಯಾಧ್ಯಕ್ಷ ವಿಜಯೇಂದ್ರ ನಡುವಿನ ಸ್ನೇಹದ ಬಗ್ಗೆ ಹಾಗೂ ಡಿ.ಕೆ.ಶಿವಕುಮಾರ್ ಅವರ ಮನೆಗೆ ತೆರಳಿ ವಿಜಯೇಂದ್ರ 20 ಪತ್ರಗಳಿಗೆ ಸಹಿ ಹಾಕಿಸಿಕೊಂಡಿರುವ ವಿಡಿಯೋಗಳಿದ್ದು, ಅವುಗಳನ್ನು ಬಹಿರಂಗ ಮಾಡುತ್ತೇನೆ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ನೀಡಿ ಆರೋಪಿಸಿದ್ದರು.

ಇದಕ್ಕೆ ಪ್ರತಿಕ್ರಿಯಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್, ವಿಜಯೇಂದ್ರ ಮಾತ್ರವಲ್ಲ ಅವರ ತಂದೆಯೂ ನನ್ನ ಬಳಿ ಬಂದಿದ್ದರು. ಇದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದ್ದಾರೆ. ಆ ಮೂಲಕ, ಯತ್ನಾಳ್ ಅವರಿಗೆ ಟಾಂಗ್ ನೀಡಿದ್ದಾರೆ. 

ನಾನು ಈ ರಾಜ್ಯದ ಉಪಮುಖ್ಯಮಂತ್ರಿ. ಈ ಹಿಂದೆ ಯಡಿಯೂರಪ್ಪನವರು ಅವರ ಕ್ಷೇತ್ರದ ಕೆಲಸಗಳ ಕುರಿತು ಒಂದಷ್ಟು ಪತ್ರಗಳಿಗೆ ಸಹಿ ಹಾಕಿಸಿಕೊಂಡು ಹೋಗಿದ್ದರು" ಎಂದು ಹೇಳಿದ್ದಾರೆ. ಆ ಮೂಲಕ, ಯತ್ನಾಳ್ ಆರೋಪಿಸಿರುವ ವಿದ್ಯಮಾನದಲ್ಲಿ ಮುಚ್ಚುಮರೆಯಿಲ್ಲ ಎಂದು ಹೇಳಿದ್ದಾರೆ.

ಸದ್ಯ  ರಾಜ್ಯ ಬಿಜೆಪಿಯ ಎರಡು ಬಣಗಳ ಜಗಳ ದೆಹಲಿ ಅಂಗಣ ತಲುಪಿದೆ. ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಗೆ, ಬಿಜೆಪಿಯ ಶಿಸ್ತು ಸಮಿತಿ ಶೋಕಾಸ್ ನೋಟಿಸ್ ನೀಡಿದೆ.