ಕರ್ನಾಟಕ

ಬಸ್ ಪ್ರಯಾಣಿಕರಿಗೆ NWKRTC ಕಡೆಯಿಂದ ಗುಡ್ ನ್ಯೂಸ್.. ಇದು ಗೌರಿ-ಗಣೇಶ ಹಬ್ಬದ ಗಿಫ್ಟ್..!

ಗೌರಿ-ಗಣೇಶ ಹಬ್ಬಕ್ಕೆ ಕೌಂಟ್ ಡೌನ್ ಶುರುವಾಗಿದೆ. ಹಬ್ಬದ ರಜೆ, ವಾರದ ರಜೆ ಹಿನ್ನೆಲೆ ಜನ ಸಾಮಾನ್ಯರು, ತಮ್ಮ-ತಮ್ಮ ಊರುಗಳಿಗೆ ತೆರಳಲು ಸಿದ್ಧರಾಗಿದ್ದಾರೆ. ಈ ನಿಟ್ಟಿನಲ್ಲಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ಪ್ರಯಾಣಿಕರಿಗೆ ಗುಡ್ ನ್ಯೂಸ್ ನೀಡಿದೆ. ಅಂದರೆ ಸಾರ್ವಜನಿಕರಿಗೆ NWKRTC ಕಡೆಯಿಂದ ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿದೆ.

ಗೌರಿ-ಗಣೇಶ ಹಬ್ಬ ಹಿನ್ನೆಲೆ ತಮ್ಮ ತಮ್ಮ ಊರುಗಳಿಗೆ ತೆರಳಲಿರುವ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಲಿದೆ. ಇದರಿಂದ ಬಸ್ ರಶ್ ಆಗುವ ಸಾಧ್ಯತೆಯೂ ಹೆಚ್ಚಿದೆ. ಅಲ್ಲದೇ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿ, ಬಸ್ ವ್ಯವಸ್ಥೆ ಕಡಿಮೆಯಾದರೆ ತೊಂದರೆ ಉಂಟಾಗುವ ಸಾಧ್ಯತೆಯೂ ಹೆಚ್ಚಾಗಲಿದೆ. ಹೀಗಾಗಿ ಪ್ರಯಾಣಿಕರ ಸುಗಮ ಸಂಚಾರವನ್ನು ದೃಷ್ಟಿಯಲ್ಲಿಟ್ಟುಕೊಂಡು, NWKRTC ಸಂಸ್ಥೆ ವಿಶೇಷ ಬಸ್ ವ್ಯವಸ್ಥೆ ಕಲ್ಪಿಸಲಿದೆ. ಸೆಪ್ಟೆಂಬರ್ 5 ರಿಂದ 10ರವರೆಗೆ ಈ ವಿಶೇಷ ಬಸ್ ಗಳು ಸಂಚರಿಸಲಿವೆ. ಅಲ್ಲದೇ ಸೀಟ್ ಬುಕಿಂಗ್ ನಲ್ಲಿ ರಿಯಾಯಿತಿ ಕೂಡ ಇರಲಿದೆ ಎನ್ನಲಾಗುತ್ತಿದೆ.

 

ಈ ವಿಶೇಷ ಬಸ್ ವ್ಯವಸ್ಥೆ ಬೆಂಗಳೂರು, ಪುಣೆ, ಹೈದರಾಬಾದ್ ನಿಂದ ಹುಬ್ಬಳ್ಳಿ, ಧಾರವಾಡ, ಗದಗ, ಬೆಳಗಾವಿ, ಚಿಕ್ಕೋಡಿ, ಉತ್ತರ ಕನ್ನಡ, ಹಾವೇರಿ, ಬಾಗಲಕೋಟೆ ಜಿಲ್ಲೆಗಳಿಗೆ ಬಿಡಲಾಗಿದೆ.