ತುಮಕೂರು : ಕೆಸರು ಗದ್ದೆಯಂತಾದ ಗ್ರಾಮದ ರಸ್ತೆ, ರಸ್ತೆ ಸರಿಪಡಿಸಲು ಅಧಿಕಾರಿಗಳು ಮೀನಾಮೇಷ ಎಣಿಸುತ್ತಿದ್ದಾರೆ. ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ರೊಚ್ಚಿಗೆದಿದ್ದಾರೆ. ಕೆಸರು ಗದ್ದೆ ರಸ್ತೆಯಲ್ಲೇ ಮೈ ತುಂಬಾ ಕೆಸರು ಹಚ್ಚಿಕೊಂಡು ಗ್ರಾಮ ಪಂಚಾಯತಿ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ವಿನೂತನ ಪ್ರತಿಭಟನೆ ನಡೆಸಿ ಅಧಿಕಾರಿಗಳ ವಿರುದ್ದ ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ.

ಚಿಕ್ಕನಾಯಕನಹಳ್ಳಿ ತಾಲೂಕಿನ ಕಂದಿನಕೆರೆ ಗ್ರಾಮ ಪಂಚಾಯತಿ ಬಳಿ ಈ ಘಟನೆ ನಡೆದಿದೆ. ಕಂದಿನಕೆರೆ ಗ್ರಾ ಪಂ ವ್ಯಾಪ್ತಿಗೆ ಸೇರಿದ ಗೋಟ್ಟಿಗೆನಹಳ್ಳಿ ಗ್ರಾಮದ ರಸ್ತೆ ಸಂಪೂರ್ಣವಾಗಿ ಹಾಳಾಗಿದ್ದು, ಸಣ್ಣ ಪ್ರಮಾಣದಲ್ಲಿ ಮಳೆ ಬಂದರೆ ಸಾಕು ಇಡೀ ರಸ್ತೆಯೆಲ್ಲಾ ಕೆಸರು ಗದ್ದೆಯಂತಾಗುತ್ತದೆ. ಹಲವು ವರ್ಷಗಳಿಂದ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಗಮನಕ್ಕೆ ತಂದರು ಪ್ರಯೋಜನವಾಗಿಲ್ಲ. ಇನ್ನು ರಸ್ತೆ ಸರಿಪಡಿಸಲು ಹಿಂದೇಟು ಹಾಕುತ್ತಿದ್ದಾರೆ. ಇದರಿಂದ ರೊಚ್ಚಿಗೆದ್ದ ಗ್ರಾಮಸ್ಥರು ಕೆಸರು ಗದ್ದೆಯಂತಾದ ರಸ್ತೆಯಲ್ಲೇ ಮೈ ತುಂಬಾ ಕೆಸರು ಹಚ್ಚಿಕೊಂಡು ಗ್ರಾಮ ಪಂಚಾಯತಿ ಮುಂದೆ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.