ದಾವಣಗೆರೆ : ಮನೆಯ ಗೋಡೆ ಕುಸಿದು ಬಿದ್ದು ವೃದ್ಧನೊಬ್ಬ ಸಾವನ್ನಪ್ಪಿದ್ದು, ಈ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಸಂತೆಬೆನ್ನೂರಿನಲ್ಲಿ ನಡೆದಿದೆ. (81) ವರ್ಷದ ಕುಳಗಟ್ಟೆ ಬಸವರಾಜಪ್ಪ ಎಂಬುವರು ಮೃತ ದುರ್ಧೈವಿಯಾಗಿದ್ದಾರೆ.
ನಿನ್ನೆ ರಾತ್ರಿ ಸುರಿದ ಭಾರಿ ಮಳೆಯಿಂದ ಈ ಅವಘಡ ಸಂಭವಿಸಿದ್ದು, ಈ ವೇಳೆ ಮನೆಯಲ್ಲಿದ್ದ ಬಸವರಾಜಪ್ಪ, ಹಾಗೂ ಆತನ ಮಗ ಹಾಗೂ ಸೊಸೆ ಮನೆಯಿಂದ ಹೊರಗೆ ಬಂದಿದ್ದಾರೆ. ಆದರೆ ಮನೆಯಿಂದ ಹೊರಲು ಆಗದೆ ವೃದ್ಧ ಬಸವರಾಜಪ್ಪನ ಮೇಲೆ ಗೋಡೆ ಕುಸಿದಿದ್ದು, ಗೋಡೆ ಕುಸಿದು ತೀವ್ರ ಗಾಯಗೊಂಡು ಸಾವನ್ನಪ್ಪಿದ್ದಾರೆ. ಈ ಘಟನೆ ಸಂಬಂಧ ಸ್ಥಳಕ್ಕೆ ಚನ್ನಗಿರಿ ತಹಶೀಲ್ದಾರರು ಭೇಟಿ ನೀಡಿ ಪರಿಶಿಲನೆ ನಡೆಸಿದ್ದಾರೆ. ಮೃತರ ಕುಟುಂಬಕ್ಕೆ ಐದು ಲಕ್ಷ ರೂ. ಚೆಕ್ನ್ನು ನೀಡಿದ್ದಾರೆ. ಈ ಕುರಿತು ಸಂತೆಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.