ಕರ್ನಾಟಕ

ಮತ್ತೆ ಗಗನಕ್ಕೇರಿದ ಈರುಳ್ಳಿ, ಬೆಳ್ಳುಳ್ಳಿ ಬೆಲೆ

ಅಡುಗೆ ಮನೆಯ ಹಾಟ್ ಫೇವರಿಟ್ ಈರುಳ್ಳಿ, ಬೆಳ್ಳುಳ್ಳಿ ಬೆಲೆ ಸಿಲಿಕಾನ್‌ ಸಿಟಿ ಬೆಂಗಳೂರಲ್ಲಿ ದಿನದಿಂದ ದಿನಕ್ಕೆ ಏರಿಕೆಯಾಗ್ತಿದೆ.

ಬೆಂಗಳೂರು: ಅಡುಗೆ ಮನೆಯ ಹಾಟ್ ಫೇವರಿಟ್ ಈರುಳ್ಳಿ, ಬೆಳ್ಳುಳ್ಳಿ ಬೆಲೆ ಸಿಲಿಕಾನ್‌ ಸಿಟಿ ಬೆಂಗಳೂರಲ್ಲಿ ದಿನದಿಂದ ದಿನಕ್ಕೆ ಏರಿಕೆಯಾಗ್ತಿದೆ. ಚಿಲ್ಲರೆ ಮಾರುಕಟ್ಟೆಯಲ್ಲಿ ಬೆಳ್ಳುಳ್ಳಿ ದರ ಈಗಾಗಲೇ ಅರ್ಧಶತಕ ಬಾರಿಸಿ ಮುನ್ನುಗ್ಗುತ್ತಿದೆ. 

ಈರುಳ್ಳಿ ಬೆಲೆ ನೂರರ ಗಡಿ ತಲುಪುವ ಸಾಧ್ಯತೆ ಇದೆ. ಬೆಳ್ಳುಳ್ಳಿ ಕೆಜಿಗೆ 500 ರಿಂದ 550 ರೂಪಾಯಿಗೆ ಮಾರಾಟವಾಗ್ತಿದ್ರೆ.. ಈರುಳ್ಳಿ 70 ರಿಂದ 80 ರೂಪಾಯಿಗೆ ಮಾರಾಟವಾಗ್ತಿದೆ. 

ಅಕಾಲಿಕ ಮಳೆಯಿಂದ ಬೆಳೆ ನಷ್ಟವಾಗಿದ್ದು, ಹೊರ ರಾಜ್ಯಗಳ ಆಮದು ಕಡಿಮೆಯಾಗಿದೆ. ಹೀಗಾಗಿ ಬೆಲೆ ಏರಿಕೆಯಾಗಿದೆ ಎಂದು ವ್ಯಾಪಾರಸ್ಥರು ತಿಳಿಸಿದ್ದಾರೆ. 

ಅಲ್ಲದೇ ರಾಜ್ಯದಲ್ಲಿ ಸುರಿದ ಅಕಾಲಿಕ ಮಳೆ ಹಿನ್ನೆಲೆಯಲ್ಲಿ ಬೆಳೆ ನಾಶವಾಗಿದೆ. ಇದರಿಂದ ಮಾರುಕಟ್ಟೆಗೆ ಈರುಳ್ಳಿ ಮತ್ತು ಬೆಳ್ಳುಳ್ಳಿ ಸರಿಯಾಗಿ ಬಾರದ ಹಿನ್ನೆಲೆಯಲ್ಲಿ ದರ ಹೆಚ್ಚಳವಾಗಿದೆ. ಪರಿಸ್ಥಿತಿ ಹೀಗೆ ಮುಂದುವರೆದರೆ ಈರುಳ್ಳಿ ಬೆಲೆ ನೂರರ ಗಡಿ ದಾಟುವ ಸಾಧ್ಯತೆ ಇದೆ.