ಪಂಚಮಸಾಲಿ ಸಮುದಾಯದ ಮೀಸಲಾತಿ ಡಿಮ್ಯಾಂಡ್ ಹೊಸ ಸ್ವರೂಪ ಪಡೆದುಕೊಂಡಿದೆ. ಪ್ರತಿಬಾರಿ ಸರ್ಕಾರಕ್ಕೆ ಮನವಿ ಮಾಡುತ್ತಿದ್ದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಈಗ ಪುಟಿದೆದ್ದಾರೆ. ಮೀಸಲಾತಿ ಬೇಕೇ ಬೇಕು ಎಂದು ಪಟ್ಟು ಹಿಡಿದಿದ್ದಾರೆ. ಇದರ ನಡುವೆ ಸೋಮವಾರ ಬೆಳಗಾವಿಯಲ್ಲಿ ಬೃಹತ್ ಹೋರಾಟ ಕೂಡ ನಡೆಸಿದ್ದಾರೆ. ಪ್ರತಿಭಟನೆ ವೇಳೆ ಕಲ್ಲು ತೂರಾಟ, ಹಿಂಸಾಚಾರ ಕೂಡ ನಡೆದಿದ್ದು, ಪೊಲೀಸರು ಲಾಠಿ ಚಾರ್ಜ್ ಕೂಡ ಮಾಡಿದ್ದಾರೆ. ಅಧಿವೇಶನದಲ್ಲೂ ಪಂಚಮಸಾಲಿ ಮೀಸಲಾತಿ ಡಿಮ್ಯಾಂಡ್ ಬಗ್ಗೆ ಚರ್ಚೆಯಾಗಿದ್ದು, ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡುವುದು ಸಂವಿಧಾನ ವಿರೋಧ ಎಂದು ತಿಳಿಸಿದ್ದಾರೆ.
ಬಿಜೆಪಿ ಅವಧಿಯಲ್ಲೂ 2ಎ ಮೀಸಲಾತಿ ಕಿಚ್ಚು ಹಬ್ಬಿತ್ತು. ಆದ್ರೆ ಮೀಸಲಾತಿ ಅನ್ನೋದು ಮಾತ್ರ ಪಂಚಮಸಾಲಿ ಸಮುದಾಯಕ್ಕೆ ಕನಸಾಗಿಯೇ ಉಳಿತು. ಹೀಗಾಗಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನವರು ಮೀಸಲಾತಿ ನೀಡುವ ಭರವಸೆ ನೀಡಿದ್ರು. ಆದ್ರೀಗ ಆ ಭರವಸೆ ಕೂಡ ಸುಳ್ಳಾಗಿದ್ದು, ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಕೊಡಲಾಗುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಪರೋಕ್ಷವಾಗಿ ತಿಳಿಸಿದ್ದಾರೆ.