ಬೆಳಗಾವಿಯಲ್ಲಿ ಪಂಚಮಸಾಲಿ ಮೀಸಲಾತಿ ಕಿಚ್ಚು..ಕಲ್ಲು ತೂರಾಟ ನಡೆಸಿದವರ ವಿರುದ್ಧ ಎಫ್‌ಐಆರ್..!‌

ನಿನ್ನೆ ಬೆಳಗಾವಿಯಲ್ಲಿ ನಡೆದ ಪಂಚಮಸಾಲಿ ಹೋರಾಟ ದೊಡ್ಡ ಸದ್ದು ಮಾಡಿದೆ. ಹೋರಾಟದ ವೇಳೆ ಕಲ್ಲು ತೂರಾಟ ನಡೆದಿದ್ದು, ಪ್ರಕರಣ ಸಂಬಂಧ ಹಲವರ ವಿರುದ್ಧ ಪೊಲೀಸರೇ ಸ್ವಯಂಪ್ರೇರಿತ ದೂರು ದಾಖಲಿಸಿದ್ದಾರೆ.

ನಿನ್ನೆ ಬೆಳಗಾವಿಯಲ್ಲಿ ನಡೆದ ಪಂಚಮಸಾಲಿ ಹೋರಾಟ ದೊಡ್ಡ ಸದ್ದು ಮಾಡಿದೆ. ಹೋರಾಟದ ವೇಳೆ ಕಲ್ಲು ತೂರಾಟ ನಡೆದಿದ್ದು, ಪ್ರಕರಣ ಸಂಬಂಧ ಹಲವರ ವಿರುದ್ಧ ಪೊಲೀಸರೇ ಸ್ವಯಂಪ್ರೇರಿತ ದೂರು ದಾಖಲಿಸಿದ್ದಾರೆ. ನಿನ್ನೆ ನಡೆದ ಕಲ್ಲು ತೂರಾಟದ ವೇಳೆ ಇನ್ಸ್‌ಪೆಕ್ಟರ್‌ ಸೇರಿದಂತೆ ಹದಿನೇಳು ಜನರಿಗೆ ಗಾಯಗಳಾಗಿದ್ದವು. ಹಾಗೆಯೇ ಏಳು ಸರ್ಕಾರಿ ಬಸ್‌, ಮೂರು ಪೊಲೀಸ್‌ ವಾಹನ ಜಖಂಗೊಂಡ ಹಿನ್ನೆಲೆ ಹಿರೇಬಾಗೇವಾಡಿ ಪೊಲೀಸರು  ಸ್ವಯಂಪ್ರೇರಿತ ದೂರು ದಾಖಲಿಸಿದ್ದಾರೆ. ನಿಂಗಪ್ಪ ಬಣದ್, ರಾಮಗೌಡ ಫಕೀರಗೌಡ, ಉಮೇಶ್ ಇಂಗಳೆವಾರ್, ಮಂಜುನಾಥ್ ಬೆಂಡಿಗೇರಿ, ಮಂಜುನಾಥ್ ಗುಮ್ಮಗೋಳ ಹಾಗೂ ಇತರರ ಮೇಲೆ ಎಫ್ಐಆರ್ ದಾಖಲಾಗಿದೆ.