5 ವರ್ಷವೂ ಸಿದ್ದರಾಮಯ್ಯನವರೇ ಸಿಎಂ ಆಗಿರ್ತಾರೆ ಎಂದು, ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಸದ್ಯಕ್ಕೆ ರಾಜ್ಯದಲ್ಲಿ ಸಿಎಂ ಬದಲಾವಣೆಯ ಪ್ರಶ್ನೆಯೇ ಇಲ್ಲ ಎಂದಿದ್ದಾರೆ. ಅಲ್ಲದೇ ನೀವು ಸಿಎಂ ಆಗ್ತೀರಾ ಎಂದು ಮಾಧ್ಯಮದವರು ಪ್ರಶ್ನೆ ಕೇಳಿದಾಗ, ನನ್ನ ಯಾಕೆ ಕೀಟಲೆ ಮಾಡುತ್ತೀರಾ ಎಂದು ನಕ್ಕು ಸುಮ್ಮನಾಗಿದ್ದಾರೆ. ಅಲ್ಲದೇ ಸಿದ್ದರಾಮಯ್ಯ 5 ವರ್ಷ ಸಿಎಂ ಅಂತ ಹೇಳಿದ್ದೇನಲ್ಲ ಎಂದಿದ್ದಾರೆ.