ವೈರಲ್
ಚಾಂಪಿಯನ್ಸ್ ಟ್ರೋಫಿ ಆರಂಭಕ್ಕೂ ಮುನ್ನ ಭಾರತದ ಧ್ವಜಕ್ಕೇ ಅವಮಾನಿಸಿದೆ ಪಾಕಿಸ್ತಾನ ಕ್ರಿಕೆಟ್ ಬೋರ್ಡ್(PCB)..
ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾಗವಹಿಸುವ ಇತರ ರಾಷ್ಟ್ರಗಳ ಧ್ವಜಗಳು ಕ್ರೀಡಾಂಗಣದಲ್ಲಿ ಕಂಡುಬಂದರೆ, ಭಾರತದ ಧ್ವಜ ಕಣ್ಮರೆಯಾಗಿದೆ.
ಫೆಬ್ರುವರಿ 19 ರಿಂದ ಚಾಂಪಿಯನ್ಸ್ ಟ್ರೋಫಿ ಟೂರ್ನಿ ಆರಂಭವಾಗಲಿದ್ದು, ಈ ಬಾರಿ ಪಾಕಿಸ್ತಾನ ಪಂದ್ಯಾವಳಿಯನ್ನು ಆಯೋಜಿಸುತ್ತಿದೆ. ಕರಾಚಿಯ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾರತೀಯ ಧ್ವಜ ಗೈರಾಗಿದ್ದನ್ನು ತೋರಿಸುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಹೊಸ ವಿವಾದಕ್ಕೆ ಕಾರಣವಾಗಿದೆ.
ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾಗವಹಿಸುವ ಇತರ ರಾಷ್ಟ್ರಗಳ ಧ್ವಜಗಳು ಕ್ರೀಡಾಂಗಣದಲ್ಲಿ ಕಂಡುಬಂದರೆ, ಭಾರತದ ಧ್ವಜ ಕಾಣೆಯಾಗಿದೆ. ಈ ದೃಶ್ಯವು ಸಾಮಾಜಿಕ ಮಾಧ್ಯಮದಲ್ಲಿ ಕೆಲವು ಅಭಿಮಾನಿಗಳನ್ನು ದಿಗ್ಭ್ರಮೆಗೊಳಿಸಿದೆ. ಭಾರತದ ಧ್ವಜ ಇಲ್ಲದಿರುವುದರ ಹಿಂದಿನ ನಿಖರವಾದ ಕಾರಣ ತಿಳಿದಿಲ್ಲವಾದರೂ, ಭದ್ರತೆಯ ಕಾರಣದಿಂದಾಗಿ ಭಾರತ ತಂಡವು ತನ್ನೆಲ್ಲ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳನ್ನು ದುಬೈನಲ್ಲಿ ಆಡುತ್ತಿದೆ. ಹೀಗಾಗಿ, ಪಾಕಿಸ್ತಾನದಲ್ಲಿ ಭಾರತದ ಧ್ವಜ ಹಾಕಿಲ್ಲದಿರಬಹುದು ಎಂದು ಹೇಳಲಾಗಿದೆ.
1996ರ ನಂತರ ಮೊದಲ ಬಾರಿಗೆ ಪಾಕಿಸ್ತಾನ ICC ಕಾರ್ಯಕ್ರಮವನ್ನು ಆಯೋಜಿಸುತ್ತಿದೆ. ರೋಹಿತ್ ಶರ್ಮಾ ನಾಯಕತ್ವದ ಟೀಂ ಇಂಡಿಯಾ ಫೆಬ್ರುವರಿ 20 ರಂದು ದುಬೈನಲ್ಲಿ ನಡೆಯಲಿರುವ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ ಸೆಣಸಲಿದೆ.
ಪಾಕಿಸ್ತಾನದ ಕರಾಚಿ, ಲಾಹೋರ್ ಮತ್ತು ರಾವಲ್ಪಿಂಡಿಯಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳನ್ನು ಆಯೋಜಿಸಲಾಗಿದೆ. 2025ರ ಆವೃತ್ತಿಯಲ್ಲಿ ಎಂಟು ತಂಡಗಳು ಆಡಲಿದ್ದು, ನಾಲ್ಕು ತಂಡಗಳ ಎರಡು ಗುಂಪುಗಳ್ನಾಗಿ ಮಾಡಲಾಗುತ್ತದೆ. ಪ್ರತಿ ಗುಂಪಿನಿಂದ ಅಗ್ರ ಎರಡು ಸೆಮಿಫೈನಲ್‌ಗೆ ಪ್ರವೇಶ ಪಡೆಯುತ್ತವೆ.