ಕರ್ನಾಟಕ

ಗ್ಯಾರಂಟೀಗಳ ಹೆಸರಿನಲ್ಲಿ ಜನರ ಬ್ರೈನ್ ವಾಷ್ ಮಾಡ್ತಿದ್ದಾರೆ-HDK ಆಕ್ರೋಶ

ತೆರಿಗೆ ಅಧಿಕಾರಿಗಳ ಸಭೆ ಮಾಡಿ ಇನ್ನೂ ಹೆಚ್ಚುವರಿಯಾಗಿ ₹10,000 ಕೋಟಿ ವಸೂಲಿ ಮಾಡುವಂತೆ ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ. ಅಂದರೆ, ಇನ್ನಷ್ಟು ಸುಲಿಗೆ ಮಾಡಿ ಅಂತ ಅರ್ಥ ಅಲ್ಲವೇ? ಇದು ಯಾವ ಪುರುಷಾರ್ಥಕ್ಕೆ? ಎಂದು ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದರು.

ಚನ್ನಪಟ್ಟಣ : ಶಕ್ತಿ ಯೋಜನೆಯ ಮರು ಪರಿಶೀಲನೆಯ ನಾಟಕ ಗ್ಯಾರಂಟಿಗಳನ್ನು ಒಂದೊಂದಾಗಿಯೇ ತೆಗೆಯಲು ಮೊದಲ ಹಂತಂದ ಪ್ರಕ್ರಿಯೆ ಎಂದೇ ಭಾವಿಸಬೇಕಾಗುತ್ತದೆ. ಇದು ಗ್ಯಾರಂಟಿ ನಿಲ್ಲಿಸಲು ಒಂದು ಪೀಠಿಕೆ ಮಾತ್ರ. ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಗ್ಯಾರಂಟಿಗಳನ್ನೇ ಪ್ರಮುಖವಾಗಿ ಇವರು ಹೇಳುತ್ತಿದ್ದರು. ನುಡಿದಂತೆ ನಡೆದಿದ್ದೇವೆ ಎಂದು ಜನರ ಬ್ರೈನ್ ವಾಷ್ ಮಾಡುತ್ತಿದ್ದರು. ಇದರಿಂದ ಅಭಿವೃದ್ಧಿ ಕೆಲಸಗಳನ್ನು ಸಂಪೂರ್ಣವಾಗಿ ನಿಲ್ಲಿಸಿದ್ದರು. 

Will resign willingly if need arises: Union Minister HDK takes a swipe at  Siddaramaiah


ಈ ಕುರಿತು ಮಾತನಾಡಿದ ಅವರು, ಗ್ಯಾರಂಟಿ ಹೆಸರು ಹೇಳಿ ಜನರಿಗೆ ಹೊರೆ ಹೊರೆಸಿ, ಅವರ ಹಣವನ್ನೇ ಕಿತ್ತು ಅವರಿಗೆ ಚೂರುಪಾರು ಹಂಚುವ ಗ್ಯಾರಂಟಿಗಳಿಗೆ ಅರ್ಥ ಇದೆಯಾ? ಚುನಾವಣೆ ಗೆಲ್ಲುವ ದುರಾಸೆಯಿಂದ ಇಂಥ ಅವಾಸ್ತವಿಕ ಭರವಸೆಗಳನ್ನು ಕೊಟ್ಟು ರಾಜ್ಯವನ್ನು ಹಾಳು ಮಾಡಿದ್ದಾರೆ. ಜರನ್ನು ರಣಹದ್ದುಗಳ ರೀತಿಯಲ್ಲಿ ಸರಕಾರ ಕಿತ್ತು ತಿನ್ನುತ್ತಿದೆ ಎಂದು ಅವರು ದೂರಿದರು. ತೆರಿಗೆ ಅಧಿಕಾರಿಗಳ ಸಭೆ ಮಾಡಿ ಇನ್ನೂ ಹೆಚ್ಚುವರಿಯಾಗಿ ₹10,000 ಕೋಟಿ ವಸೂಲಿ ಮಾಡುವಂತೆ ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ. ಅಂದರೆ, ಇನ್ನಷ್ಟು ಸುಲಿಗೆ ಮಾಡಿ ಅಂತ ಅರ್ಥ ಅಲ್ಲವೇ? ಇದು ಯಾವ ಪುರುಷಾರ್ಥಕ್ಕೆ? ಎಂದು ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದರು.

ಈ ಬಗ್ಗೆ ಮಾತನಾಡಿದ ಹೆಚ್.ಡಿ. ಕುಮಾರಸ್ವಾಮಿ ಅವರು,  ಗ್ಯಾರಂಟಿಗಳಿಂದ ಕ್ಯಾಪಿಟಲ್ ಅಸೆಟ್ ಆಗುತ್ತಿಲ್ಲ, ಬರೀ ಖರ್ಚಾಗುತ್ತಿದೆ. ನಾನು ಗ್ಯಾರಂಟಿ ಕೊಡುವುದನ್ನು ವಿರೋಧಿಸುತ್ತಿಲ್ಲ. ಗ್ಯಾರಂಟಿ ಕೊಡಿ, ಗ್ಯಾರಂಟಿ ಹೆಸರಲ್ಲಿ ಆರ್ಥಿಕ ಪರಿಸ್ಥಿತಿ ಹಾಳು ಮಾಡಬೇಡಿ. ಮುಂದಿನ ಅಧಿಕಾರ ನಡೆಸುವ ಪೀಳಿಗೆಯ ಭವಿಷ್ಯ ಹಾಳು ಮಾಡಬೇಡಿ. ಅನ್ನಭಾಗ್ಯಕ್ಕೂ ಷರತ್ತುಗಳನ್ನು ವಿಧಿಸಿದ್ದಾರೆ. ಗೃಹಲಕ್ಷ್ಮಿಗೂ ಷರತ್ತುಗಳನ್ನು ಹಾಕಿದ್ದಾರೆ. ಅಕ್ಕಿ ಕೊಡುವುದನ್ನು ಕಡಿತಗೊಳಿಸಿದ್ದಾರೆ. ಇದು ಮುಂದೆ ಯಾವ ಹಂತಕ್ಕೆ ಹೋಗುತ್ತದೆ ಈಜುವುದನ್ನು ಕಾದು ನೋಡಬೇಕು ಎಂದು ಕೇಂದ್ರ ಸಚಿವರು ಕಳವಳ ವ್ಯಕ್ತಪಡಿಸಿದರು.