ಬ್ರಿಸ್ಬೇನ್: ಬಾರ್ಡರ್ ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ಮೂರನೇ ಪಂದ್ಯದ ಮೊದಲ ದಿನದಾಟ ಮಳೆಯಿಂದಾಗಿ ರದ್ದಾಗಿದೆ.
ಉಭಯ ತಂಡಗಳೂ ಗೆಲ್ಲಲೇಬೇಕಾದ ಒತ್ತಡದಲ್ಲಿರುವ ಬ್ರಿಸ್ಬೇನ್ ಟೆಸ್ಟ್ ನಲ್ಲಿ ಟಾಸ್ ಗೆದ್ದ ಭಾರತ ತಂಡ ಬೌಲಿಂಗ್ ಆಯ್ಕೆ ಮಾಡಿಕೊಂಡಿತ್ತು. ಆದರೆ 13.2 ಓವರ್ ಗಳ ಮಳೆ ಸುರಿಯಲಾರಂಭಿಸಿದ್ದರಿಂದ ಆಟವನ್ನು ಸ್ಥಗಿತಗೊಳಿಸಲಾಗಿತ್ತು. ಪದೇ ಪದೇ ಮಳೆ ಬಂದಿದ್ದರಿಂದ ಹಾಗೂ ಔಟ್‌ಫೀಲ್ಡ್ ನಲ್ಲಿ ನೀರು ನಿಂತಿದ್ದರಿಂದಾಗಿ ಮೊದಲ ದಿನದಾಟವನ್ನು ರದ್ದುಗೊಳಿಸಲಾಗಿದೆ.
ಟಾಸ್ ಸೋತು ಬ್ಯಾಟಿಂಗ್‌ಗೆ ಬಂದ ಆಸ್ಟ್ರೇಲಿಯಾ ತಂಡದ ಪರ ಉಸ್ಮಾನ್ ಖವಾಜಾ 19 ಮತ್ತು ನಾಥನ್ ಮೆಕ್‌ಸ್ವೀನಿ 4 ರನ್ ಗಳಿಸಿದ್ದರು. ಆಸ್ಟ್ರೇಲಿಯಾ ತಂಡ 13.2 ಓವರ್ ನಲ್ಲಿ 28 ರನ್ ಗಳಿಸಿದೆ.
ಇನ್ನು ಟೀಂ ಇಂಡಿಯಾ ಪರ ಅಡಿಲೇಡ್ ಟೆಸ್ಟ್ ನಲ್ಲಿ ಆಡಿದ್ದ ತಂಡದಲ್ಲಿ 2 ಬದಲಾವಣೆ ಮಾಡಲಾಗಿದೆ. ಆರ್. ಅಶ್ವಿನ್ ಸ್ಥಾನದಲ್ಲಿ ರವೀಂದ್ರ ಜಡೇಜಾ ಕಣಕ್ಕಿಳಿದರೆ ಹರ್ಷಿತ್ ರಾಣಾ ಸ್ಥಾನದಲ್ಲಿ ಆಕಾಶ್ ದೀಪ್ ಆಡುವ 11 ರ ಬಳಗದಲ್ಲಿ ಸ್ಥಾನ ಪಡೆದಿದ್ದಾರೆ.