ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಈ ಸಿನಿಮಾದಲ್ಲಿ ನಾಯಕನಾಗಿ ನಟಿಸಿದರೆ, ಯಶಾ ಶಿವಕುಮಾರ್, ವೇದಿಕಾ ನಾಯಕಿಯರಾಗಿ ನಟಿಸಿದ್ದಾರೆ. ಇದೀಗ ಇದೇ ಚಿತ್ರ ಜನವರಿ 31ರಂದು ಚಿತ್ರಮಂದಿರಗಳಿಗೆ ಗ್ರ್ಯಾಂಡ್ ಆಗಿ ಲಗ್ಗೆ ಇಡುತ್ತಿದೆ.
ಹೈದರಾಬಾದ್ ಮೂಲದ ಪಾರ್ಥು ಎಂಬುವವರು ತಮ್ಮ ಚೆರಿ ಕ್ರಿಯೇಷನ್ಸ್ ಬ್ಯಾನರ್ ಮೂಲಕ ಗಣ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಗಣ ಸಿನಿಮಾದ ನಿರ್ದೇಶಕರೂ ಕೂಡ ತೆಲುಗು ಮೂಲದವರೇ. ಇತ್ತೀಚೆಗಷ್ಟೇ ಟಾಲಿವುಡ್‌ನಲ್ಲಿ ಹಿಟ್ ಆದ ಪುಷ್ಪ 2 ಸಿನಿಮಾ ನಿರ್ದೇಶಕ ಸುಕುಮಾರ್ ಅವರ ಜತೆಗೆ ಕೆಲಸ ಮಾಡಿದ ಅನುಭವ ಇರುವ ಹರಿಪ್ರಸಾದ್ ಜಕ್ಕ, ಗಣ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಆಗಮಿಸಿದ್ದಾರೆ.
ಗಣ"ಇದೊಂದು ಪಕ್ಕ ಫ್ಯಾಮಿಲಿ ಎಂಟರ್‌ಟೈನರ್ ಸಿನಿಮಾ. ಒಳ್ಳೆಯ ಮನರಂಜನೆಯ ಜತೆಗೆ ಪ್ರೇಕ್ಷಕ ಬಯಸುವ ಎಲ್ಲ ಅಂಶಗಳೂ ಗಣ ಸಿನಿಮಾದಲ್ಲಿದೆ. ಕರ್ಮಷಿಯಲ್ ಕೋನದಲ್ಲಿ ನಿರ್ಮಾಣ ಮಾಡಿದರೂ, ನೋಡುಗರನ್ನು ಸೀಟಿನ ತುದಿಗೆ ತಂದು ಕೂರಿಸುವ ತಾಕತ್ತು ನಮ್ಮ ಈ ಚಿತ್ರಕ್ಕಿದೆ. ಈಗಾಗಲೇ ಟ್ರೇಲರ್‌ನಲ್ಲಿ ಇದಕ್ಕೆ ಉತ್ತರ ಸಿಕ್ಕಿದೆ. ಟೈಮ್ ಟ್ರಾವೆಲಿಂಗ್ ಜಾನರ್‌ನ ಈ ಸಿನಿಮಾ, ಎರಡು ಕಾಲಘಟ್ಟದಲ್ಲಿ ನಡೆಯುತ್ತದೆ. ಗಟ್ಟಿ ಕಂಟೆಂಟ್ ಜತೆಗೆ ಅಮ್ಮ ಮಗನ ಬಾಂಧವ್ಯವೂ ಈ ಸಿನಿಮಾದ ಹೈಲೈಟ್
ಸರಿ ಸುಮಾರು 75 ದಿನಗಳ ಕಾಲ ಈ ಸಿನಿಮಾ ಶೂಟಿಂಗ್ ಮಾಡಲಾಗಿದೆ. ಚಿತ್ರದಲ್ಲಿ ನಾಲ್ಕು ಹಾಡುಗಳಿದ್ದು, ಈಗಾಗಲೇ ಮೂರು ಹಾಡುಗಳು ಸರಿಗಮ ಕನ್ನಡ ಯೂಟ್ಯೂಬ್ ಚಾನಲ್‌ನಲ್ಲಿ ಬಿಡುಗಡೆ ಆಗಿವೆ. ಟ್ರೇಲರ್ ಸಹ ಎಲ್ಲರಿಗೂ ಇಷ್ಟವಾಗಿದೆ. ಇದೀಗ ಜನವರಿ 31ರ ಶುಕ್ರವಾರ ಕರ್ನಾಟಕದಾದ್ಯಂತ 200ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಸಿನಿಮಾ ಬಿಡುಗಡೆಯಾಗ್ತಿದೆ..
ಅಂದಹಾಗೆ ಅನೂಪ್ ಸೀಳಿನ್ ಸಂಗೀತ ನೀಡಿರುವ ಈ ಚಿತ್ರದಲ್ಲಿ ಒಟ್ಟು ನಾಲ್ಕು ಹಾಡುಗಳಿವೆ. ಜೈ ಆನಂದ್ ಛಾಯಾಗ್ರಹಣ, ಹರೀಶ್ ಕೊಮ್ಮೆ ಸಂಕಲನ , ಸತೀಶ್ ಎ ಕಲಾ ನಿರ್ದೇಶನ ಹಾಗೂ ಡಿ.ಜೆ ಕ್ರಿಯೇಟಿವ್ ಪ್ರೊಡ್ಯೂಸರ್ ಆಗಿ ಕಾರ್ಯನಿರ್ವಹಿಸಿದ್ದಾರೆ. ಪಾತ್ರವರ್ಗದಲ್ಲಿ ಪ್ರಜ್ವಲ್ ದೇವರಾಜ್, ಯಶಾ ಶಿವಕುಮಾರ್, ವೇದಿಕಾ ಕುಮಾರ್, ಕೃಷಿ ತಾಪಂಡ, ವಿಶಾಲ್ ಹೆಗಡೆ, ರವಿ ಕಾಳೆ, ಸಂಪತ್ ರಾಜ್, ಶಿವರಾಜ್ ಕೆ.ಆರ್ ಪೇಟೆ, ರಮೇಶ್ ಭಟ್ ಮುಂತಾದವರು ನಟಿಸಿದ್ದಾರೆ.