ಪ್ರತಿ ಸಿನಿಮಾಗಳಲ್ಲಿಯೂ ಭಿನ್ನ ವಿಭಿನ್ನ ಪಾತ್ರಗಳ ಮೂಲಕ ರಂಜಿಸುವ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ರಾಕ್ಷಸ ಅವತಾರವೆತ್ತಿರುವುದು ಗೊತ್ತೇ ಇದೆ. ಅಂದರೆ ಈ ಚಿತ್ರದಲ್ಲಿ ಡಿಫರೆಂಟ್ ಗೆಟಪ್ ಧರಿಸಿದ್ದಾರೆ. ಶಿವರಾತ್ರಿ ಹಬ್ಬಕ್ಕೆ ತೆರೆಗೆ ಬರುತ್ತಿರುವ ರಾಕ್ಷಸ ಸಿನಿಮಾದಿಂದ ಮತ್ತೊಂದು ಅಪ್ ಡೇಟ್ ಸಿಕ್ಕಿದೆ. ತೆಲುಗಿನಲ್ಲಿಯೂ ಬಿಡುಗಡೆಯಾಗುತ್ತಿರುವ ಈ ಚಿತ್ರದ ಥಿಯೇಟರ್ ಹಕ್ಕನ್ನು ಕಂಚಿ ಕಾಮಾಕ್ಷಿ ಕೋಲ್ಕತಾ ಕಾಳಿ ಕ್ರಿಯೇಷನ್ ತನ್ನದಾಗಿಸಿಕೊಂಡಿದೆ. ಅಖಂಡ ತೆಲುಗು ಪ್ರೇಕ್ಷಕರಿಗೆ ರಾಕ್ಷಸ ಸಿನಿಮಾವನ್ನು ಈ ಸಂಸ್ಥೆ ತಲುಪಿಸಲಿದೆ.
"ಇತ್ತೀಚೆಗೆ ಕನ್ನಡ ಸಿನಿಮಾಗಳು ವ್ಯಾಪಾರವಾಗ್ತಿರುವುದೇ ಕಡಿಮೆ. ಹೀಗಿದ್ದರೂ ಈಗಾಗಲೇ ಕನ್ನಡ ಥಿಯೇಟರ್ ರೈಟ್ಸ್ ಬಿಕರಿಯಾಗಿದೆ. ಈಗ ಬರೀ ಟೀಸರ್, ಟ್ರೇಲರ್, ಕಂಟೆಂಟ್ ನೋಡಿಯೇ ಕಂಚಿ ಕಾಮಾಕ್ಷಿ ಕೋಲ್ಕತಾ ಕಾಳಿ ಕ್ರಿಯೇಷನ್ ಒಳ್ಳೆ ಮೊತ್ತಕ್ಕೆ ಹಕ್ಕನ್ನು ತಮ್ಮದಾಗಿಸಿಕೊಂಡಿದೆ. ಎಂದು ನಿರ್ಮಾಪಕರಾಗಿರುವ ದೀಪು ಬಿ.ಎಸ್ ಖುಷಿ ಹಂಚಿಕೊಂಡಿದ್ದಾರೆ.