ಕರ್ನಾಟಕ

ಹುಬ್ಬಳ್ಳಿಯಿಂದ ಚೆನ್ನೈ, ಅಹಮದಾಬಾದ್ ಗೆ ವಿಮಾನ ಸೌಲಭ್ಯ ಕಲ್ಪಿಸಲು ಜೋಶಿ ಕಸರತ್ತು..!

ಹುಬ್ಬಳ್ಳಿಯಿಂದ ಅಹಮದಾಬಾದ್ ಹಾಗೂ ಚೆನ್ನೈಗೆ ವಿಮಾನಯಾನ ಸೌಲಭ್ಯ ಕಲ್ಪಿಸುವಂತೆ, ವಿಮಾನಯಾನ ಸಚಿವರಿಗೆ ಪ್ರಹ್ಲಾದ್ ಜೋಶಿ ಮನವಿ ಮಾಡಿದ್ದಾರೆ.

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು, ವಿಮಾನಯಾನ ಸಚಿವ ರಾಮಮೋಹನ್ ನಾಯ್ಡು ಅವರನ್ನು ಭೇಟಿ ಮಾಡಿದ್ದಾರೆ. ಹುಬ್ಬಳ್ಳಿಯಿಂದ ಅಹಮದಾಬಾದ್ ಹಾಗೂ ಚೆನ್ನೈಗೆ ವಿಮಾನಯಾನ ಸೌಲಭ್ಯ ಕಲ್ಪಿಸುವಂತೆ ಮನವಿ ಮಾಡಿ ಚರ್ಚೆ ನಡೆಸಿದ್ದಾರೆ.

ಅಲ್ಲದೇ ಹುಬ್ಬಳ್ಳಿ-ಚೆನ್ನೈಗೆ ಇರುವ ವಿಮಾನ ಸಂಪರ್ಕ ಸ್ಥಗಿತಗೊಳಿಸುವುದು ಬೇಡ. ವಾಣಿಜ್ಯ ನಗರಿ ಹುಬ್ಬಳ್ಳಿಗೆ ಅನೇಕ ಉದ್ಯಮಿಗಳ ಸಂಪರ್ಕವಿದೆ. ಅಹಮದಾಬಾದ್ ಮತ್ತು ಚೆನ್ನೈ ನಗರಗಳಿಗೆ ವಿಮಾನ ಸಾರಿಗೆ ಸೌಲಭ್ಯಕ್ಕೆ ಹೆಚ್ಚು ಆದ್ಯತೆ ನೀಡಿದಲ್ಲಿ ಉದ್ಯಮಿಗಳ ತ್ವರಿತ ಸಂಚಾರ ಮತ್ತು ನಿಕಟ ಸಂಪರ್ಕಕ್ಕೆ ಅನುಕೂಲವಾಗುತ್ತದೆ ಎಂದು ಜೋಶಿ ಹೇಳಿದರು.