ಕರ್ನಾಟಕ

87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಭರದ ಸಿದ್ಧತೆ..ಸಚಿವರಿಂದ ಗುದ್ದಲಿ ಪೂಜೆ..!

ಸೆಂಬರ್ 20ರಿಂದ ಮೂರು ದಿನಗಳ ಕಾಲ ನಡೆಯಲಿರುವ, 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ವೇದಿಕೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿದೆ.

ಮಂಡ್ಯ ಹೊರ ವಲಯದ ಸ್ಯಾಂಜೋ ಆಸ್ಪತ್ರೆಯ ಹಿಂಭಾಗದಲ್ಲಿ ಇಂದು, ಸಾಹಿತ್ಯ ಸಮ್ಮೇಳನದ ವೇದಿಕೆರೆ ಗುದ್ದಲಿ ಪೂಜೆ ನೆರವೇರಿದೆ. ಡಿಸೆಂಬರ್ 20ರಿಂದ ಮೂರು ದಿನಗಳ ಕಾಲ ನಡೆಯಲಿರುವ, 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ವೇದಿಕೆ ನಿರ್ಮಾಣಕ್ಕೆ, ಎನ್.ಚಲುವರಾಯಸ್ವಾಮಿ ಗುದ್ದಲಿ ಪೂಜೆ ನೆರವೇರಿಸಿದರು. ಜೊತೆಗೆ ಶಾಸಕರಾದ ಗಣಿಗ ಪಿ.ರವಿಕುಮಾರ್, ಪಿ.ಎಂ.ನರೇಂದ್ರಸ್ವಾಮಿ, ಪರಿಷತ್ ಸದಸ್ಯರಾದ ದಿನೇಶ್ ಗೂಳಿಗೌಡ, ಮಧು ಜಿ.ಮಾದೇಗೌಡ, ಸ್ಥಳೀಯ ಮುಖಂಡರು ಕೂಡ ಭಾಗಿಯಾಗಿದ್ರು.