ದೇಶ

ತುಳಸಿ ಗೌಡ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ

ಅವರ ಕೆಲಸಗಳು ತಲೆಮಾರುಗಳಿಗೆ ಪ್ರೇರಣೆ ನೀಡುತ್ತಿರುತ್ತವೆ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ಸಂತಾಪಗಳು ಅಂತಾ ಪ್ರಧಾನಿ ಬರೆದುಕೊಂಡಿದ್ದಾರೆ.

ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಉತ್ತರ ಕನ್ನಡದ ಅಂಕೋಲ ತಾಲೂಕಿನ ಹೊನ್ನಳ್ಳಿಯ ತುಳಸಿ ಗೌಡ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಈ ಕುರಿತು Xನಲ್ಲಿ ಪೋಸ್ಟ್ ಮಾಡಿರುವ ಮೋದಿ ಬೇಸರ ವ್ಯಕ್ತಪಡಿಸಿದ್ದಾರೆ.. ಕರ್ನಾಟಕದ ಪರಿಸರವಾದಿ ಮತ್ತು ಪದ್ಮ ಪ್ರಶಸ್ತಿ ಪುರಸ್ಕೃತರಾದ ಶ್ರೀಮತಿ ತುಳಸಿ ಗೌಡ ಅವರ ನಿಧನ ತೀವ್ರ ದುಃಖ ತಂದಿದೆ. ಅವರು ತಮ್ಮ ಇಡೀ ಬದುಕನ್ನು ಪ್ರಕೃತಿ ಪೋಷಣೆಗಾಗಿ ಮುಡಿಪಾಗಿಟ್ಟು, ಸಾವಿರಾರು ಗಿಡಗಳನ್ನು ನೆಟ್ಟು ಬೆಳೆಸಿ ನಮ್ಮ ಪರಿಸರವನ್ನು ಸಂರಕ್ಷಿಸಿದವರು.  ಪರಿಸರ ರಕ್ಷಣೆಗೆ ಸದಾ ಮಾರ್ಗದರ್ಶನ ನೀಡುವ ಬೆಳಕಾಗಿ ಅವರು ಉಳಿಯುತ್ತಾರೆ. ಅವರ ಕೆಲಸಗಳು ತಲೆಮಾರುಗಳಿಗೆ ಪ್ರೇರಣೆ ನೀಡುತ್ತಿರುತ್ತವೆ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ಸಂತಾಪಗಳು ಅಂತಾ ಪ್ರಧಾನಿ ಬರೆದುಕೊಂಡಿದ್ದಾರೆ. ಇನ್ನು ತುಳಸಿ ಗೌಡ ಅವರ ಅಂತ್ಯಕ್ರಿಯೆ ಇಂದು ಅಂಕೋಲಾದ ಹೊನ್ನಳ್ಳಿಯಲ್ಲಿ ನಡೆಯಲಿದೆ.