ದೇಶ

ಸಂಗಮ್‌ ಘಾಟ್‌ನಲ್ಲಿ ಪುಣ್ಯಸ್ನಾನ ಮಾಡಿದ ಪ್ರಧಾನಿ ಮೋದಿ

10:45 ಕ್ಕೆ ಏರಿಯಲ್ ಘಾಟ್‌ಗೆ ತೆರಳಿದ್ದರು. 10.50ಕ್ಕೆ ಏರಿಯಲ್ ಘಾಟ್‌ನಿಂದ ದೋಣಿಯಲ್ಲಿ ಮಹಾ ಕುಂಭಮೇಳಕ್ಕೆ ಪ್ರಯಾಣಿಸಿದ್ದು, ಬೆಳಗ್ಗೆ 11 ರಿಂದ 11.30 ಅವಧಿಯಲ್ಲಿ ಸಂಗಮ್ ಘಾಟ್‌ನಲ್ಲಿ ಪವಿತ್ರ ಸ್ನಾನ ಮಾಡಲಿದ್ದಾರೆ.

ಪ್ರಯಾಗ್‌ ರಾಜ್‌ನಲ್ಲಿ ಮಹಾಕುಂಭಮೇಳ ನಡೆಯುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಪುಣ್ಯಸ್ನಾನ ಮಾಡಿದ್ದಾರೆ. ಸಂಗಮ್‌ ಘಾಟ್‌ನಲ್ಲಿ ಮೋದಿ ಮಿಂದೆದಿದ್ದು, ಗಂಗಾ ಮಾತೆಗೆ ನಮಿಸಿದ್ದಾರೆ. ರುದ್ರಾಕ್ಷಿ ಮಾಲೆ ಹಿಡಿದು ಮಂತ್ರ ಪಟಣೆ ಮಾಡುತ್ತಾ ಮೋದಿ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ್ದಾರೆ. 

ಬೆಳಗ್ಗೆ 10.05 ಕ್ಕೆ ಪ್ರಯಾಗ್‌ರಾಜ್ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದ ಮೋದಿ, ಅಲ್ಲಿಂದ 10.10ಕ್ಕೆ ಡಿಪಿಎಸ್ ಹೆಲಿಪ್ಯಾಡ್‌ಗೆ ಪ್ರಯಾಣಿಸಿ, ನಂತರ 10:45 ಕ್ಕೆ ಏರಿಯಲ್ ಘಾಟ್‌ಗೆ ತೆರಳಿದ್ದರು. 10.50ಕ್ಕೆ ಏರಿಯಲ್ ಘಾಟ್‌ನಿಂದ ದೋಣಿಯಲ್ಲಿ ಮಹಾ ಕುಂಭಮೇಳಕ್ಕೆ ಪ್ರಯಾಣಿಸಿದ್ದು, ಬೆಳಗ್ಗೆ 11 ರಿಂದ 11.30 ಅವಧಿಯಲ್ಲಿ ಸಂಗಮ್ ಘಾಟ್‌ನಲ್ಲಿ ಪವಿತ್ರ ಸ್ನಾನ ಮಾಡಲಿದ್ದಾರೆ.