ಕರ್ನಾಟಕ

ಕರ್ನಾಟಕಕ್ಕೆ ಅನ್ಯಾಯ ಮಾಡಲಾಗುತ್ತಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಪ್ರೊಟೆಸ್ಟ್..!

ಕೇಂದ್ರ ಸರ್ಕಾರದಿಂದ ಕರ್ನಾಟಕ ವಿರೋಧಿ ಧೋರಣೆ ಕಾಣುತ್ತಿದೆ ಎಂದು ಆರೋಪಿಸಿ, ಡಿ. ದೇವರಾಜು ಅರಸು ಹಿಂದುಳಿದ ವರ್ಗಗಳ ವೇದಿಕೆಯಿಂದ ಬೃಹತ್‌ ಪ್ರತಿಭಟನೆ ನಡೆದಿದೆ.

ಕೇಂದ್ರ ಸರ್ಕಾರದಿಂದ ಕರ್ನಾಟಕ ವಿರೋಧಿ ಧೋರಣೆ ಕಾಣುತ್ತಿದೆ ಎಂದು ಆರೋಪಿಸಿ, ಡಿ. ದೇವರಾಜು ಅರಸು ಹಿಂದುಳಿದ ವರ್ಗಗಳ ವೇದಿಕೆಯಿಂದ ಬೃಹತ್‌ ಪ್ರತಿಭಟನೆ ನಡೆದಿದೆ. ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆಯಿಂದ ಡಿಸಿ ಕಚೇರಿವರೆಗೆ ಮೆರವಣಿಗೆ ಮಾಡಲಾಗಿದೆ.  ಡಿಸಿ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಕೆಯಾಗಿದೆ. ನೆಲ, ಜಲ, ಭಾಷೆ, ಸಂಸ್ಕೃತಿ ವಿಚಾರದಲ್ಲಿ ರಾಜ್ಯಕ್ಕೆ ನಿರಂತರ ಅನ್ಯಾಯ ಮಾಡಲಾಗುತ್ತಿದೆ. ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಕ್ಕೆ ಮಾತ್ರ ಮಾನ್ಯತೆ ನೀಡಲಾಗುತ್ತಿದೆ. ಅನುದಾನ, ಅಧಿಕಾರ, ಅಭಿವೃದ್ಧಿ, ಆದ್ಯತೆ, ತೆರಿಗೆ ಹಂಚಿಕೆ ವಿಚಾರದಲ್ಲೂ ದ್ರೋಹದ ಆರೋಪ ಮಾಡಲಾಗಿದೆ. ಕರ್ನಾಟಕಕ್ಕೆ ನ್ಯಾಯ ಕೊಡಿಸಿ ಎಂದು ರಾಷ್ಟ್ರಪತಿಗೆ ಡಿಸಿ ಮೂಲಕ ಮನವಿ ಸಲ್ಲಿಕೆ ಆಗ್ರಹ ಮಾಡಲಾಗಿದೆ.