ಬಸವಣ್ಣನವರ ಬಗ್ಗೆ ಶಾಸಕ ಯತ್ನಾಳ್ ವಿವಾದಾತ್ಮಕ ಹೇಳಿಕೆ ವಿರುದ್ಧ, ಬೆಳಗಾವಿಯಲ್ಲಿ ಆಕ್ರೋಶ ಭುಗಿಲೆದ್ದಿದೆ. ಬೆಳಗಾವಿಯಲ್ಲಿ ರಾಷ್ಟ್ರೀಯ ಬಸವದಳದಿಂದ ಯತ್ನಾಳ್ ವಿರುದ್ಧ ಬೃಹತ್ ಹೋರಾಟ ನಡೆದಿದೆ. ಯತ್ನಾಳ್ ವಿರುದ್ಧ ಏಕವಚನದಲ್ಲಿ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಪ್ರತಿಕೃತಿ ದಹಿಸಲು ಬಿಡದ ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಯತ್ನಾಳ್ ಪ್ರತಿಕೃತಿ ದಹಿಸಲು ಹೋರಾಟಗಾರರು ಯತ್ನಿಸಿದ್ದು, ಈ ವೇಳೆ ಪೊಲೀಸರು ಹೋರಾಟಗಾರರನ್ನು ನಿಯಂತ್ರಣ ಮಾಡಿದ್ದಾರೆ. ಹೋರಾಟದ ನಡುವೆ ಪೊಲೀಸರು ಹಾಗೂ ಹೋರಾಟಗಾರರ ನಡುವೆ ಮಾತಿನ ಚಕಮಕಿ ನಡೆದಿದೆ.