ಕರ್ನಾಟಕ

ಹಸುವಿನ ಕೆಚ್ಚಲು ಕೊಯ್ದ ಘಟನೆ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ: ಆರ್‌.ಅಶೋಕ

ಇದಕ್ಕೆ ಬಿಜೆಪಿ ಪಕ್ಷ ಹಾಗೂ ಹಿಂದೂಗಳು ಬೆದರುವುದಿಲ್ಲ, ಆರೋಪಿಯನ್ನು ವಿಚಾರಣೆ ಮಾಡಿಲ್ಲ, ಪೊಲೀಸರು ಸೂಕ್ತ ತನಿಖೆ ಮಾಡಲಿ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು.

ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕತ್ತರಿಸಿದ ಪ್ರಕರಣದ ಸೂಕ್ತ ತನಿಖೆಗಾಗಿ ಆಗ್ರಹಿಸಿ ಬಿಜೆಪಿ ರಾಜ್ಯದಾದ್ಯಂತ ಪ್ರತಿಭಟನೆ ಮಾಡಲಿದೆ. ಈ ಘಟನೆಯಿಂದ ಹಿಂದೂಗಳನ್ನು ಬೆದರಿಸಲು ಸಾಧ್ಯವಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. 

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕತ್ತರಿಸಿದ್ದು, ರಕ್ತ ಸುರಿಯುವುದನ್ನು ನಾನು ಕಣ್ಣಾರೆ ಕಂಡಿದ್ದೇನೆ. ಆದರೆ ಇದು ಒಬ್ಬರೇ ಮಾಡಿದ ಕೃತ್ಯವಲ್ಲ. ಇದರಲ್ಲಿ ಹಲವರು ಭಾಗಿಯಾಗಿದ್ದಾರೆ. ಈ ಕುರಿತು ಪೊಲೀಸರು ಸರಿಯಾಗಿ ತನಿಖೆ ಮಾಡಬೇಕಿತ್ತು. ಈಗ ಸಂಕ್ರಾಂತಿ ಹಬ್ಬ ನಡೆಯುತ್ತಿದೆ. ಪ್ರಯಾಗ್‌ರಾಜ್‌ನಲ್ಲಿ ಮಹಾಕುಂಭಮೇಳ ನಡೆಯುತ್ತಿದೆ. ಇಂತಹ ಸಮಯದಲ್ಲೇ ಈ ಕೃತ್ಯ ಮಾಡುವುದರ ಜೊತೆಗೆ ಹಸು ಮಾಲೀಕ ಕರ್ಣ ಅವರಿಗೆ ಕಾಂಗ್ರೆಸ್‌ ಕಾರ್ಯಕರ್ತರು ಹಸುವನ್ನು ಪಡೆಯುವಂತೆ ಒತ್ತಡ ಹೇರಿದ್ದಾರೆ ಎಂದು ದೂರಿದರು.