ತಾಯವ್ವ.. ಈ ಟೈಟಲ್ ಇದೀಗ ಮತ್ತೊಮ್ಮೆ ರಿಪೀಟ್ ಆಗಿದೆ.. ಸೂಲಗಿತ್ತಿ ಸುತ್ತ ಸಾಗುವ ಕಥೆಯಾಗಿರುವ ತಾಯವ್ವ ಚಿತ್ರದ ಪೋಸ್ಟರ್ ಹಾಗೂ ಟೈಟಲ್ ಸಾಂಗ್ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಹಿರಿಯ ನಟಿ ಉಮಾಶ್ರೀ ಬಿಡುಗಡೆ ಮಾಡಿದ್ದಾರೆ..

ಆರ್.ಅಶೋಕ್ ಮಾತನಾಡಿ, ತಾಯವ್ವ ಮನಸ್ಸಿಗೆ ಮುಟ್ಟು ಪದ. ತಾಯಿ ಅನ್ನೋ ಪದವೇ ಹಾಗೇ. ವಿಶೇಷವಾಗಿ ಹೆಣ್ಣು ಮಕ್ಕಳ ಬಗ್ಗೆ ತಯಾರಾಗಿರುವ ಸಿನಿಮಾ ಇದು. ಹೆಣ್ಣು ವಿಚಾರ ಬಂದಾಗ ತಾಯಿ ಭಾವನೆ ಇವೆಲ್ಲಾ ಪ್ರಮುಖವಾಗುತ್ತದೆ. ಈ ದೃಷ್ಟಿಯಿಂದ ತಾಯವ್ವ ಸಿನಿಮಾ ಮೂಡಿಬಂದಿದೆ. ಸಿನಿಮಾ ಆಗಿ ಹೊರಹೊಮ್ಮಲಿ ಎಂದು ಶುಭ ಹಾರೈಸಿದರು.

ಹಿರಿಯ ನಟಿ ಉಮಾಶ್ರೀ ಮಾತನಾಡಿ, ಸುದೀಪ್ ಮೊದಲ ಸಿನಿಮಾ ತಾಯವ್ವ ಅನ್ನೋ ಟೈಟಲ್ ಮೇಲೆಯೇ ಆಗಿದ್ದು. ನಾನು ಆ ಚಿತ್ರದಲ್ಲಿ ಅಜ್ಜಿ ಅಥವಾ ತಾಯಿ ಪಾತ್ರ ಮಾಡಿದ್ದೆ. ಅದೇ ಟೈಟಲ್ ಈಗ ಕನ್ನಡ ಚಿತ್ರರಂಗದಲ್ಲಿ ರೀಪೀಟ್ ಆಗ್ತಿದೆ. ಹೀಗಾಗಿ ಇಡೀ ತಂಡಕ್ಕೆ ಒಳ್ಳೆದಾಗಲಿ ಎಂದರು.
ತಾಯವ್ವ ಸಿನಿಮಾವನ್ನು ನಂದಿ ಪ್ರಶಸ್ತಿ ಸಂಸ್ಥಾಪಕಿಯಾಗಿರುವ ಎಸ್.ಪದ್ಮಾವತಿ ಚಂದ್ರಶೇಖರ್ ನಿರ್ಮಾಣ ಮಾಡಿದ್ದು, ಸಾತ್ವಿಕ್ ಪವನ್ ಕುಮಾರ್ ನಿರ್ದೇಶನದ ಮಾಡಿದ್ದಾರೆ…ಪಿ.ಶೇಷಗಿರಿ ಕಥೆ ಚಿತ್ರಕಥೆ ಸಂಭಾಷಣೆ ಬರೆದಿರುವ ತಾಯವ್ವನಿಗೆ ಅನಂತ್ ಆರ್ಯನ್ ಸಂಗೀತ ಸಂಯೋಜಿಸಿದ್ದಾರೆ. ಉಳಿದಂತೆ ಬಹುತೇಕ ರಂಗಭೂಮಿ ಕಲಾವಿದರು ನಟಿಸಿದ್ದಾರೆ. ನಿರ್ಮಾಪಕ ಭಾ.ಮ.ಹರೀಶ್ ಈ ಚಿತ್ರವನ್ನು ಅರ್ಪಿಸುತ್ತಿದ್ದು, ಶೂಟಿಂಗ್ ಮುಗಿಸಿರುವ ತಾಯವ್ವ ಸಿನಿಮಾ ಸೆನ್ಸಾರ್ ಗೆ ಸಜ್ಜಾಗಿದೆ.