ಕರ್ನಾಟಕ

ತಪ್ಪು ಮಾಡಿರುವ ಆರ್. ಅಶೋಕ್ ಮೊದಲು ರಾಜೀನಾಮೆ ನೀಡಲಿ : ಸಿಎಂ ಸಿದ್ದರಾಮಯ್ಯ

ರಾಯಚೂರಿನಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಆರ್. ಅಶೋಕ್ ಮೊದಲು ರಾಜಿನಾಮೆ ನೀಡಲಿ. ಜಮೀನು ಖರೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರು ಮೊದಲು ರಾಜಿನಾಮೆ ನೀಡಲಿ ಎಂದು ಕಿಡಿಕಾರಿದ್ದಾರೆ.

ರಾಯಚೂರು: ವಿರೋಧಪಕ್ಷದ ನಾಯಕರಾದ ಆರ್ ಅಶೋಕ್ ಅವರ ಮೇಲೆ FIR ದಾಖಲಾಗಿದೆ. ಹಾಗಾಗಿ ನಾನು ರಾಜೀನಾಮೆ ನೀಡಲು ಸಿದ್ದ. ಸಿಎಂ ಅವರೂ ರಾಜಿನಾಮೆ ನೀಡಲಿ ಎಂದಿರುವ ಆರ್. ಅಶೋಕ್ ಹೇಳಿಕೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. 

ರಾಯಚೂರಿನಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಆರ್. ಅಶೋಕ್ ಮೊದಲು ರಾಜಿನಾಮೆ ನೀಡಲಿ. ಜಮೀನು ಖರೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರು ಮೊದಲು ರಾಜಿನಾಮೆ ನೀಡಲಿ ಎಂದು ಕಿಡಿಕಾರಿದ್ದಾರೆ.

ರಾಜ್ಯ ಕಾಂಗ್ರೆಸ್ ನ ವಿವಿಧ ನಾಯಕರು ವರಿಷ್ಠರೊಂದಿಗೆ ಚರ್ಚೆ ಮಾಡುವುದು ಸಹಜ. ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಊಹಾಪೋಹಗಳು ಅಗತ್ಯವಿಲ್ಲ. ವಿಪಕ್ಷಗಳು ನನ್ನ ಮೇಲೆ ಸುಳ್ಳು ಆರೋಪಗಳನ್ನು ಮಾಡಿ ರಾಜಿನಾಮೆ ಬೇಡಿದರೆ, ರಾಜಿನಾಮೆ ಕೊಡಲು ಸಾಧ್ಯವಿಲ್ಲ. ಸುಳ್ಳು ಆರೋಪಗಳನ್ನು ಮಾಡಿದರೆ, ವಸ್ತುಸ್ಥಿತಿಯನ್ನು ಜನರ ಮುಂದಿಡುವ ಕೆಲಸ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.