ದೆಹಲಿ: ಕಾಂಗ್ರೆಸ್ ನಾಯಕಿ ಪ್ರೀಯಾಂಕಾ ಗಾಂಧಿ ವಯನಾಡ್ ಕ್ಷೇತ್ರದಲ್ಲಿ ಪ್ರಚಂಡ ಬಹುಮತದಿಂದ ಗೆದ್ದು ಬೀಗಿದ್ದಾರೆ. ಚೊಚ್ಚಲ ಚುನಾವಣೆಯಲ್ಲೇ ಗೆಲುವು ಸಾಧಿಸಿ ವಯನಾಡ್ನ ಸಂಸದೆಯಾಗಿದ್ದಾರೆ. ಇಂದು ಪ್ರಿಯಾಂಕಾ ಗಾಂಧಿ ವಾದ್ರಾ ಸಂಸದೆಯಾಗಿ ಮೊಟ್ಟ ಮೊದಲ ಬಾರಿಗೆ ಕೇರಳದ ಬ್ರೋಕೆಡ್ ಸೀರೆಯನ್ನು ಧರಿಸಿ ಸಂಸತ್ ಪ್ರವೇಶಿಸಿದ್ದಾರೆ. ಇದಕ್ಕೂ ಮುನ್ನ ತಂಗಿ ಚೊಚ್ಚಲ ಬಾರಿಗೆ ಸಂಸದೆಯಾಗಿ ಸಂಸತ್ ಪ್ರವೇಶಸುತ್ತಿರುವ ಸಂತೋಷದ ಕ್ಷಣವನ್ನು ಅಣ್ಣನಾದ ರಾಹುಲ್ ಗಾಂಧಿ ತಮ್ಮ ಮೊಬೈಲ್ ನಲ್ಲಿ ಸೆರೆಹಿಡಿದಿದ್ದಾರೆ.
#WATCH | Congress leader Priyanka Gandhi Vadra entered the Lok Sabha today, marking the beginning of her journey as the Member of Parliament
(Video source: AICC) pic.twitter.com/tE8jdtSffc
ಪ್ರಮಾಣ ವಚನ ಸ್ವೀಕರಿಸಲು ಸಂಸತ್ ಭವನಗೊಳಗೆ ಹೋಗುವ ಮುನ್ನ ಪ್ರವೇಶ ದ್ವಾರದಲ್ಲಿ ಪ್ರಿಯಾಂಕಾ ಗಾಂಧಿಯನ್ನು ನಿಲ್ಲು ನಿಲ್ಲು ಎಂದು ತಡೆದು ತಮ್ಮ ಮೊಬೈಲ್ ಫೋನ್‌ನಲ್ಲಿ ತಂಗಿ ಫೋಟೋವನ್ನ ಕ್ಲಿಕ್ ಮಾಡಿದ್ದಾರೆ. ಸದ್ಯ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ನೆಟ್ಟಿಗರಿಂದ ಮೆಚ್ಚುಗೆ ಪಡೆದಿದೆ.