ವೈರಲ್

ಅಕ್ರಮ ಮರಳುಗಾರಿಕೆ ನಡೆಯುತ್ತಿದ್ದ ಸ್ಥಳದ ಮೇಲೆ ದಾಳಿ..!

ಮಂಗಳೂರಲ್ಲಿ ಅಕ್ರಮವಾಗಿ ಮರಳುಗಾರಿಕೆ ನಡೆಯುತ್ತಿದ್ದ ಸ್ಥಳಕ್ಕೆ ಅಧಿಕಾರಿಗಳು ದಾಳಿ ನಡೆಸಿ ದೋಣಿಗಳನ್ನು ವಶಪಡಿಸಿದ್ದಾರೆ.

ಮಂಗಳೂರಲ್ಲಿ ಅಕ್ರಮವಾಗಿ ಮರಳುಗಾರಿಕೆ ನಡೆಯುತ್ತಿದ್ದ ಸ್ಥಳಕ್ಕೆ ಅಧಿಕಾರಿಗಳು ದಾಳಿ ನಡೆಸಿ ದೋಣಿಗಳನ್ನು ವಶಪಡಿಸಿದ್ದಾರೆ. ಗಣಿ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ಗುರುಪುರ ಫಲ್ಗುಣಿ ನದಿಯಲ್ಲಿ ಅಕ್ರಮವಾಗಿ ಮರಳುಗಾರಿಕೆ ಮಾಡುತ್ತಿದ್ದ ಸ್ಥಳಕ್ಕೆ ದಾಳಿ ಮಾಡಿದರು. ಈ ಸಂದರ್ಭದಲ್ಲಿ ಸ್ಥಳದಲ್ಲಿದ್ದ 5 ದೋಣಿಗಳನ್ನು ಒಂದು ಮೋಟಾರು, ಗ್ಯಾಸ್‍ಸಿಲಿಂಡರ್ ವಶಪಡಿಸಲಾಯಿತು. ಮಂಗಳೂರು ಉಪವಿಭಾಗಾಧಿಕಾರಿ ಹರ್ಷವರ್ಧನ್ ಅವರ ಮಾರ್ಗದರ್ಶನದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ತಹಶೀಲ್ದಾರ್ ಪ್ರಶಾಂತ್ ಪಾಟೀಲ್, ಗಣಿ ಇಲಾಖೆ ಭೂವಿಜ್ಞಾನಿ ಗಿರೀಶ್ ಮೋಹನ್ ಮತ್ತಿತರರು ಇದ್ದರು.