ದೇಶ

ಯುಪಿಯಲ್ಲಿ ಕಳಪೆ ಕಾಮಗಾರಿಗೆ ಉರುಳಿದ ರೈಲ್ವೆ ಬಿಲ್ಡಿಂಗ್‌.. ಕಾರ್ಮಿಕರ ಗಂಭೀರ ಗಾಯ..!

ಉತ್ತರಪ್ರದೇಶದ ಕನ್ನೌಜ್ ರೈಲು ನಿಲ್ದಾಣದಲ್ಲಿ ನಿರ್ಮಾಣ ಹಂತದಲ್ಲಿದ್ದ ಕಟ್ಟಡ ಕುಸಿದು ಬಿದ್ದಿರುವ ಘಟನೆ ನಡೆದಿದೆ.. ಕಟ್ಟಡದ ಅವಶೇಷಗಳ ಅಡಿಯಲ್ಲಿ ಹಲವರು ಸಿಲುಕಿದ್ದಾರೆ.. 2 ಅಂತಸ್ತಿನ ಕಟ್ಟಡದ ಕೆಲಸ ಸಂದರ್ಭದಲ್ಲಿ ದುರಂತ ಸಂಭವಿಸಿದೆ..

ಉತ್ತರಪ್ರದೇಶದ ಕನ್ನೌಜ್ ರೈಲು ನಿಲ್ದಾಣದಲ್ಲಿ ನಿರ್ಮಾಣ ಹಂತದಲ್ಲಿದ್ದ ಕಟ್ಟಡ ಕುಸಿದು ಬಿದ್ದಿರುವ ಘಟನೆ ನಡೆದಿದೆ.. ಕಟ್ಟಡದ ಅವಶೇಷಗಳ ಅಡಿಯಲ್ಲಿ ಹಲವರು ಸಿಲುಕಿದ್ದಾರೆ.. 2 ಅಂತಸ್ತಿನ ಕಟ್ಟಡದ ಕೆಲಸ ಸಂದರ್ಭದಲ್ಲಿ ದುರಂತ ಸಂಭವಿಸಿದೆ.. ರೈಲ್ವೆ ನಿಲ್ದಾಣದ ಕಟ್ಟಡ ಕುಸಿದ ವೇಳೆ ಸುಮಾರು 35 ಕಾರ್ಮಿಕರು ಕೆಲಸ ಮಾಡುತ್ತಿದ್ದರು.. ರೈಲ್ವೆ ಅಧಿಕಾರಿಗಳು, ಪೊಲೀಸರು ಮತ್ತು ಆಡಳಿತ ಅಧಿಕಾರಿಗಳ ನೇತೃತ್ವದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು,, ಬಿಲ್ಡಿಂಗ್‌ನಲ್ಲಿ ಸಿಲುಕಿದ್ದ ಎಲ್ಲರನ್ನೂ ರಕ್ಷಿಸಲಾಗಿದೆ.. ಈ ಪೈಕಿ 6 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಆದರೆ ಅಪಾಯದಿಂದ ಪಾರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವವರಿಗೆ 50,000 ರೂಪಾಯಿ ಮತ್ತು ಸಣ್ಣಪುಟ್ಟ ಗಾಯಗೊಂಡವರಿಗೆ 5,000 ರೂಪಾಯಿ ಪರಿಹಾರವನ್ನು ಉತ್ತರ ಪ್ರದೇಶ ಸರ್ಕಾರ ಘೋಷಿಸಿದೆ.. ಲಕ್ನೋದಿಂದ SDRF ಸ್ಥಳಕ್ಕೆ ಆಗಮಿಸಿದ್ದು ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳು ಯುದ್ಧೋಪಾದಿಯಲ್ಲಿ ನಡೆಯುತ್ತಿವೆ..

#WATCH | Uttar Pradesh: Visuals from the spot where an under-construction lintel collapsed at Kannauj railway station yesterday.

According to Kanpur Commissioner K Vijayendra Pandian says, "Around 28 people have been rescued...6 people are seriously injured but out of danger" pic.twitter.com/56KBuiM3Mz