ಮಂಡ್ಯ : ಮಳೆ ಬರಬೇಕು ಬರಲಿ, ಯಾವ ಅವಾಂತರವೂ ಇಲ್ಲ. ಎಷ್ಟೇ ಮಳೆ ಬಂದ್ರು ಅರ್ಧ ಗಂಟೆಯಲ್ಲಿ ಸರಿ ಮಾಡುವ ಕೆಲಸ ಮಾಡ್ತೀವಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿಮಳೆ ಅವಾಂತರ ವಿಚಾರ ಸಂಬಂಧ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಟಿ.ಕೆ.ಹಳ್ಳಿಯಲ್ಲಿ ಮಾತನಾಡಿದ ಅವರು, ಎಷ್ಟೇ ಮಳೆ ಬಂದ್ರು ತಡೆದುಕೊಳ್ಳುವ ಶಕ್ತಿ ನಮಗಿದೆ. ಈ ಬಗ್ಗೆ ನಾವು ಸಿದ್ಧತೆ ಮಾಡಿಕೊಂಡಿದ್ದೇವೆ. ಎಲ್ಲಾ ಇಲಾಖೆಯ ಅಧಿಕಾಗಳಿಗೆ ನಿರ್ದೇಶನ ಕೊಟ್ಟಿದ್ದೇನೆ. ಬೆಂಗಳೂರಿಗೆ ಹೋದ ತಕ್ಷಣ ಮತ್ತೆ ಮೀಟಿಂಗ್ ಮಾಡ್ತೀನಿ. ಹಾಗಾಗಿ ಯಾರು ಗಾಬರಿ ಮಾಡಿಕೊಳ್ಳುವ ಅವಶ್ಯಕತೆ ಇಲ್ಲ ಎಂದಿದ್ದಾರೆ.
ಮುಂಜಾಗ್ರತಾವಾಗಿ ರಜೆ ಘೋಷಣೆ ಮಾಡಿದ್ದೇವೆ. ಈ ಸಂಬಂಧ ಟೀಕೆ ಟಿಪ್ಪಣಿಗಳು ಇದ್ದೇ ಇರುತ್ತವೆ. ಆದರೆ ಟೀಕೆಗಳು ಸತ್ತು ಹೋಗುತ್ತವೆ.. ನಮ್ಮ ಕೆಲಸಗಳು ಉಳಿಯುತ್ತವೆ ಎಂದಿದ್ದಾರೆ.