ಬೆಂಗಳೂರು : ರಂಜಾನ್ ಉಪವಾಸ ಹಿನ್ನೆಲೆ ಸಿಎಂ ಸಿದ್ದರಾಮಯ್ಯಗೆ ಕೆಪಿಸಿಸಿ ಉಪಾಧ್ಯಕ್ಷರಾದ ಸೈಯದ್ ಅಹ್ಮದ್ ಮತ್ತು ನಜೀರ್ ಅಹ್ಮದ್ ಪತ್ರ ಬರೆದಿದ್ದಾರೆ. ರಂಜಾನ್ ಸಮಯದಲ್ಲಿ ಉಪವಾಸ ತೊರೆಯಲು ಮುಸ್ಲಿಂ ಸರ್ಕಾರಿ ನೌಕರರಿಗೆ ಕೆಲಸದ ಸಮಯದಲ್ಲಿ ಒಂದು ಗಂಟೆ ವಿನಾಯಿತಿ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೈಯದ್ ಅಹ್ಮದ್ ಮತ್ತು ನಜೀರ್ ಅಹ್ಮದ್ ಪತ್ರ ಬರೆದು ಮನವಿಯನ್ನ ಮಾಡಿದ್ದಾರೆ.
ಆಂಧ್ರಪ್ರದೇಶ ಹಾಗೂ ತೆಲಂಗಾಣದಲ್ಲಿ ರಂಜಾನ್ ಉಪವಾಸ ತೊರೆಯಲು ಅನುಕೂಲವಾಗುವಂತೆ ಮುಸ್ಲಿಂ ಸರ್ಕಾರಿ ನೌಕರರಿಗೆ ಕೆಲಸದ ಅವಧಿಯಲ್ಲಿ ಅಲ್ಲಿನ ಸರ್ಕಾರಗಳು ಕೂಡ ವಿನಾಯಿತಿ ನೀಡುತ್ತಿವೆ. ಹಾಗಾಗಿ ರಾಜ್ಯದಲ್ಲೂ ಕೂಡ ವಿನಾಯಿತಿ ನೀಡುವಂತೆ ಕೋರಿ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿದ್ದಾರೆ.
ರಂಜಾನ್ ತಿಂಗಳು ಸಮೀಸುತ್ತಿದ್ದು, ಈಗಾಗಲೇ ಆಂಧ್ರಪ್ರದೇಶ, ತೆಲಂಗಾಣ ಸರ್ಕಾರವು ರಂಜಾನ್ ತಿಂಗಳಲ್ಲಿ ಮುಸ್ಲಿಂ ಬಾಂಧವರು ಒಂದು ತಿಂಗಳು ಉಪವಾಸ ಇರುತ್ತಾರೆ. ಹೀಗಾಗಿ, ಅಲ್ಲಿನ ಸರ್ಕಾರಿ ಕಚೇರಿಗಳಲ್ಲಿ ಕೆಲಸ ಮಾಡುವ ಸಿಬ್ಬಂದಿಗಳಿಗೆ ಸಂಜೆ 4 ಗಂಟೆಯ ನಂತರ ಅವರುಗಳ ನಿವಾಸಗಳಲ್ಲಿ ಉಪವಾಸ ಬಿಡಲು ಅನುಮತಿ ನೀಡಲಾಗಿದೆ. ಆದುದರಿಂದ ದಯಮಾಡಿ ತಾವು ನಮ್ಮ ಕರ್ನಾಟಕದಲ್ಲಿ ಸರ್ಕಾರಿ ಕಚೇರಿಗಳಲ್ಲಿ ಕೆಲಸ ಮಾಡುವ ಸಿಬ್ಬಂದಿಗಳಿಗೆ ಸಂಜೆ 4 ಗಂಟೆಯ ನಂತರ ಅವರುಗಳ ನಿವಾಸದಲ್ಲಿ ಉಪವಾಸ ಅನುಮತಿ ನೀಡುವಂತೆ ಈ ಮೂಲಕ ತಮ್ಮಲ್ಲಿ ವಿನಂತಿಸಿಕೊಳ್ಳುತ್ತೇವೆ” ಎಂದು ಪತ್ರ ಬರೆದಿದ್ದಾರೆ.