ಕಾಶ್ಮೀರ ಸೇರಿದಂತೆ ಎಲ್ಲಾ ಸಮಸ್ಯೆಗಳನ್ನು ಭಾರತದೊಂದಿಗೆ ಮಾತುಕತೆಯ ಮೂಲಕ ಪರಿಹರಿಸಲು ಪಾಕಿಸ್ತಾನ ಬಯಸುತ್ತದೆ ಎಂದು ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಹೇಳಿದ್ದಾರೆ. ಕಾಶ್ಮೀರ ಒಗ್ಗಟ್ಟಿನ ದಿನದ ಅಂಗವಾಗಿ ಮುಜಫರಾಬಾದ್‌ನಲ್ಲಿ ಆಯೋಜಿಸಿದ್ದ ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ವಿಧಾನಸಭೆಯ ವಿಶೇಷ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದ ಷರೀಫ್, ಭಾರತದೊಂದಿಗೆ ಶಾಂತಿ ಮಾತುಕತೆಯನ್ನು ಪುನರುಚ್ಚರಿಸಿದ್ದಾರೆ. ಎರಡೂ ದೇಶಗಳು ಕುಳಿತು ಮಾತನಾಡುವುದೊಂದೇ ಉಳಿದಿರುವ ದಾರಿಯಾಗಿದೆ ಎಂದಿದ್ದಾರೆ.. ಶಸ್ತ್ರಾಸ್ತ್ರಗಳ ಸಂಗ್ರಹಣೆಯು ಶಾಂತಿಯನ್ನು ತರುವುದಿಲ್ಲ ಅಥವಾ ಈ ಪ್ರದೇಶದ ಜನರ ಭವಿಷ್ಯವನ್ನು ಬದಲಾಯಿಸುವುದಿಲ್ಲ ಎಂದಿದ್ದಾರೆ.