ದೇಶ

ದೆಹಲಿ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ರೇಖಾ ಗುಪ್ತಾ

ದೆಹಲಿ ರಾಮ್‌ಲೀಲಾ ಮೈದಾನದಲ್ಲಿ ನಡೆದ ಪ್ರಮಾಣ ವಚನ ಸಮಾರಂಭ ನೆರವೇರಿದ್ದು, ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಗೃಹ ಸಚಿವ ಅಮಿತ್‌ ಶಾ ಸೇರಿದಂತೆ ಬಿಜೆಪಿ ಆಡಳಿತ ಇರುವ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಕೇಂದ್ರ ನಾಯಕರು ಉಪಸ್ಥಿತರಿದ್ದರು.

ನವದೆಹಲಿ : ರಾ‍ಷ್ಟ್ರ ರಾಜಧಾನಿ ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ರೇಖಾ ಗುಪ್ತಾ ಪ್ರಮಾಣವಚನ ಸ್ವೀಕರಿಸಿದ್ದಾರೆ. ದೇವರ ಹೆಸರಿನಲ್ಲಿ ರೇಖಾ ಗುಪ್ತಾ ಪ್ರತಿಜ್ಞಾ ವಿಧಿಯನ್ನ ತೆಗೆದುಕೊಂಡಿದ್ದು, ನೂತನ ಮಹಿಳಾ ಮುಖ್ಯಮಂತ್ರಿಗೆ ಲೆಫ್ಟಿನೆಂಟ್ ಗವರ್ನರ್ ವಿನಯ್ ಕುಮಾರ್ ಸಕ್ಸೇನಾ ಪ್ರಮಾಣವಚನವನ್ನ ಬೋಧಿಸಿದ್ದಾರೆ. 

ನೂತನ ಮುಖ್ಯಮಂತ್ರಿ ರೇಖಾ ಗುಪ್ತಾ ನಂತರ ಶಾಸಕ ಪ್ರವೇಶ್ ವರ್ಮಾ ಅವರು ಕ್ಯಾಬಿನೆಟ್ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಪ್ರವೇಶ್ ವರ್ಮಾ ಅವರು ಎಎಪಿ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರನ್ನು ಪರಾಭವಗೊಳಿಸಿದ್ದು, ನೂತನ ಸಂಪುಟದಲ್ಲಿ ಬಹುದೊಡ್ಡ ಜವಾಬ್ದಾರಿಯನ್ನ ನಿಭಾಯಿಸಲಿದ್ದಾರೆ.