ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಬಜ್ಜನಹಳ್ಳಿ ಗ್ರಾಮದಲ್ಲಿರುವ ಏಕಲವ್ಯ ವಸತಿ ಶಾಲೆಯ ವಿದ್ಯಾರ್ಥಿ, ಅಸ್ವಸ್ಥಗೊಂಡು ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತ ವಿದ್ಯಾರ್ಥಿ 13 ವರ್ಷದ ಅಭಿಲಾಷ್ ಎನ್ನಲಾಗಿದೆ.
ಶಕುನಿ ತಿಮ್ಮನಹಳ್ಳಿ ಗ್ರಾಮದ ರಮೇಶ್ ಎಂಬುವರ ಪುತ್ರ ಅಭಿಲಾಷ್ ಏಕಲವ್ಯ ವಸತಿ ಶಾಲೆಯಲ್ಲಿ, 6ನೇ ತರಗತಿ ಓದುತ್ತಿದ್ದ. ನಿನ್ನೆ ಮಧ್ಯಾಹ್ಮ ಊಟ ಮಾಡಿದ ಬಳಿಕ ಅಸ್ವಸ್ಥಗೊಂಡ ವಿದ್ಯಾರ್ಥಿಗೆ ಸೂಕ್ತ ಚಿಕಿತ್ಸೆ ಸಿಗದೇ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.
ಅಸ್ವಸ್ಥಗೊಂಡ ವಿದ್ಯಾರ್ಥಿಗೆ ಪ್ರಾಥಮಿಕ ಚಿಕಿತ್ಸೆ ಕೊಡದೇ ವಸತಿ ಶಾಲೆಯ ಪ್ರಾಂಶುಪಾಲರು ಹಾಗೂ ವಾರ್ಡನ್ ನಿರ್ಲಕ್ಷ್ಯ ಮಾಡಿದ್ದಾರೆ. ವಿದ್ಯಾರ್ಥಿ ಮೃತಪಟ್ಟರೂ ಆಸ್ಪತ್ರೆಗೆ ಕರೆದೊಯ್ಯದೇ ಬೇಜವಾಬ್ದಾರಿತನ ತೋರಿದ್ದಾರೆ ಎಂದು ಮೃತ ವಿದ್ಯಾರ್ಥಿಯ ಕುಟುಂಬಸ್ಥರು.ಸ್ಥಳಕ್ಕೆ ಕೊರಟಗೆರೆ ತಹಶಿಲ್ದಾರ್ ಹಾಗೂ ಕೊರಟಗೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ