ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ಸಲಹೆಗಾರ ಹುದ್ದೆಗೆ ನೀಡಿರುವ ರಾಜೀನಾಮೆ ಬಗ್ಗೆ ಕಾಂಗ್ರೆಸ್ ಶಾಸಕ ಬಿ.ಆರ್. ಪಾಟೀಲ್ ಪ್ರತಿಕ್ರಿಯೆ ನೀಡಿದ್ದಾರೆ.. ನಾನು ನಿನ್ನೆ ದಿನ ರಾಜೀನಾಮೆ ನೀಡಿದ್ದೇನೆ.. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವಿವರವಾದ ಪತ್ರ ಬರೆದಿದ್ದೇನೆ.. ಅವರು ನನ್ನನ್ನು ಕರೆದರೆ ನಾನು ಅವರೊಂದಿಗೆ ಮಾತನಾಡುತ್ತೇನೆ... ಹಲವಾರು ಕಾರಣಗಳಿವೆ, ಆದರೆ ನಾನು ಅದನ್ನು ಸಾರ್ವಜನಿಕವಾಗಿ ಬಹಿರಂಗಪಡಿಸಲು ಸಾಧ್ಯವಿಲ್ಲ... ನಾನು ಈವರೆಗೆ ಸಿಎಂ ಸಿದ್ದರಾಮಯ್ಯ ಜೊತೆ ಮಾತನಾಡಿಲ್ಲ. ನಾನು ನನ್ನ ರಾಜೀನಾಮೆಯನ್ನು ಹಿಂಪಡೆಯುವುದಿಲ್ಲ ಅಂತಾ ಬಿ.ಆರ್. ಪಾಟೀಲ್ ಹೇಳಿದ್ದಾರೆ...