ದೇಶ

ಕೋಲ್ಕತ್ತಾ ವೈದ್ಯೆ ಅತ್ಯಾಚಾರ, ಕೊಲೆ ಕೇಸ್‌.. ಆರೋಪಿಗೆ ಜೀವಾವಧಿ ಶಿಕ್ಷೆ

ಆಗಸ್ಟ್​ 9ರಂದು ಆರ್.​ಜಿ. ಕರ್ ಆಸ್ಪತ್ರೆ ಟ್ರೈನಿ ವೈದ್ಯೆಯ ಮೃತದೇಹ ಆಸ್ಪತ್ರೆಯ ಸೆಮಿನಾರ್ ಕೋಣೆಯಲ್ಲಿ ಪತ್ತೆಯಾಗಿತ್ತು.. ಭೀಕರವಾಗಿ ಆಕೆಯನ್ನು ಕೊಲೆ ಮಾಡಲಾಗಿತ್ತು.

ಕೋಲ್ಕತ್ತಾ: ಕೋಲ್ಕತ್ತಾದ ಆರ್‌.ಜಿ.ಕರ್‌ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆದಿದ್ದ ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದಲ್ಲಿ ಆರೋಪಿ ಸಂಜಯ್ ರಾಯ್‌ಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.. ಆಗಸ್ಟ್ 9ರಂದು ಆರ್.ಜಿ. ಕರ್ ಆಸ್ಪತ್ರೆ ಟ್ರೈನಿ ವೈದ್ಯೆಯ ಮೃತದೇಹ ಆಸ್ಪತ್ರೆಯ ಸೆಮಿನಾರ್ ಕೋಣೆಯಲ್ಲಿ ಪತ್ತೆಯಾಗಿತ್ತು.. ಭೀಕರವಾಗಿ ಆಕೆಯನ್ನು ಕೊಲೆ ಮಾಡಲಾಗಿತ್ತು. ಆರಂಭದಲ್ಲಿ ತನಿಖೆಯನ್ನು ಕೋಲ್ಕತ್ತಾ ಪೊಲೀಸರು ನಡೆಸಿದ್ದರು.. ಆದರೆ ಕೊಲ್ಕತ್ತಾ ಹೈಕೋರ್ಟ್‌ನ ಆದೇಶದ ನಂತರ ಈ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸಲಾಗಿತ್ತು.. ತನಿಖೆಯನ್ನು ಪೂರ್ಣಗೊಳಿಸಿ ಸಿಬಿಐ, ಸಂಜಯ್‌ ರಾಯ್‌ ವಿರುದ್ಧ ಆರೋಪಪಟ್ಟಿಯನ್ನು ಸಲ್ಲಿಸಿತು.. ಪ್ರಕರಣದ ವಾದ-ಪ್ರತಿವಾದ ಆಲಿಸಿದ್ದ ಕೋಲ್ಕತ್ತಾ ಸೆಲ್ಡಾ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ತಪ್ಪಿತಸ್ಥ ಎಂದು ತನ್ನ ತೀರ್ಪು ನೀಡಿತ್ತು.. ಇಂದು ಆರೋಪಿ ಸಂಜಯ್‌ ರಾಯ್‌ಗೆ ಜೀವಾವಧಿ ಶಿಕ್ಷೆ ವಿಧಿಸಿ ಕೋರ್ಟ್‌ ಆದೇಶಿಸಿದೆ.. ಮೃತ ವೈದ್ಯೆಯ ಕುಟುಂಬಕ್ಕೆ 17 ಲಕ್ಷ ರೂಪಾಯಿ ಪರಿಹಾರ ನೀಡುವಂತೆಯೂ ಕೋರ್ಟ್‌ ಸೂಚಿಸಿದೆ..