ಕರ್ನಾಟಕ

ಪ್ರತ್ಯರ್ಥ ಚಿತ್ರಕ್ಕೆ ರೋರಿಂಗ್ ಸ್ಟಾರ್ ಶ್ರೀ ಮುರಳಿ ಸಾಥ್

ಕನ್ನಡ ಸಿನಿಮಾದಲ್ಲಿ ಹೊಸ ತಂಡದಿಂದ ಜನರು ಏನನ್ನು ನಿರೀಕ್ಷೆ ಪಡುತ್ತಾರೋ ಆ ತರಹದ ಸಿನಿಮಾ ಪ್ರತ್ಯರ್ಥ. ಅರ್ಜುನ್ ಕಾಮತ್ ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದು, ಇದೊಂದು‌ ಇನ್ವೆಸ್ಟಿಗೇಶನ್ ಥ್ರಿಲ್ಲರ್ ಕಥಾಹಂದರ ಪ್ರತಿಯೊಂದಕ್ಕೂ ಅರ್ಥ ಇರುವುದನ್ನು ಪ್ರತ್ಯರ್ಥ ಎನ್ನಲಾಗುತ್ತದೆ.

ಇತ್ತೀಚೆಗೆ "ಪ್ರತ್ಯರ್ಥ" ಚಿತ್ರದ ಟ್ರೇಲರ್ ಅನ್ನು ರೋರಿಂಗ್ ಸ್ಟಾರ್ ಶ್ರೀಮುರಳಿ ಅನಾವರಣ ಮಾಡಿ ಚಿತ್ರ ಯಶಸ್ವಿಯಾಗಲೆಂದು ಹಾರೈಸಿದ್ದಾರೆ. ಉಡುಪಿಯ ಕಾರ್ಕಳ ಮೂಲದ ಅರ್ಜುನ್ ಕಾಮತ್ ನಿರ್ದೇಶಿಸಿರುವ ಈ ಚಿತ್ರ ಇದೇ 28ರಂದು ತೆರೆಗೆ ಬರಲಿದೆ.

ಕನ್ನಡ ಸಿನಿಮಾದಲ್ಲಿ ಹೊಸ ತಂಡದಿಂದ ಜನರು ಏನನ್ನು ನಿರೀಕ್ಷೆ ಪಡುತ್ತಾರೋ ಆ ತರಹದ ಸಿನಿಮಾ ಪ್ರತ್ಯರ್ಥ. ಅರ್ಜುನ್ ಕಾಮತ್ ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದು, ಇದೊಂದು‌ ಇನ್ವೆಸ್ಟಿಗೇಶನ್ ಥ್ರಿಲ್ಲರ್ ಕಥಾಹಂದರ ಪ್ರತಿಯೊಂದಕ್ಕೂ ಅರ್ಥ ಇರುವುದನ್ನು ಪ್ರತ್ಯರ್ಥ ಎನ್ನಲಾಗುತ್ತದೆ. 

ಇದು ಹಳೆಯ ಟೈಟಲ್ ಆದರೂ ಕೂಡ, ಈಗಿನ ಯುವಜನತೆಗೆ ಯಾವ ತರಹದ ಕಥೆ ಬೇಕು ಎಂದು ತಿಳಿದುಕೊಂಡು, ಒಂದು ವರ್ಷ ಸಮಯ ತೆಗೆದುಕೊಂಡು, ಈ ಚಿತ್ರದ ಕಥೆ ಬರೆಯಲಾಗಿದೆ. ಎರಡು ಶೇಡ್ ಗಳಲ್ಲಿ ಸಾಗುವ ಈ ಕಥೆಯ ನಾಯಕರಾಗಿ ರಾಮ್, ಅಕ್ಷಯ್ ಕಾರ್ಕಳ ನಟಿಸಿದ್ದಾರೆ. ನಾಯಕಿಯಾಗಿ ಶೃತಿ ಚಂದ್ರಶೇಖರ್ ಅಭಿನಯಿಸಿದ್ದಾರೆ. ಸುಮನ್ ತಲ್ವಾರ್, ನವೀನ್ ಡಿ ಪಡೀಲ್, ರಮೇಶ್ ಭಟ್, ದೀಪಕ್ ರೈ ಮುಂತಾದವರು ತಾರಾಬಳಗದಲ್ಲಿದ್ದಾರೆ. ಸುನಾದ್ ಗೌತಮ್ ಸಂಗೀತ ನೀಡಿದ್ದಾರೆ. ವಿನುತ್ ಛಾಯಾಗ್ರಾಹಕರಾಗಿದ್ದಾರೆ.