ರೋಹಿತ್ ದಂಪತಿ ಮನೆಗೆ ಎರಡನೇ ಅತಿಥಿಯ ಆಗಮನವಾಗಿದೆ. ಟೀಂ ಇಂಡಿಯಾ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ಪತ್ನಿ ರಿತಿಕಾ ಸಜ್ದೇ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ರೋಹಿತ್ ದಂಪತಿಗೆ ಈಗಾಗಲೇ ಸಮೈರಾ ಹೆಸರಿನ 6 ವರ್ಷದ ಮಗಳಿದ್ದಾಳೆ.
ನೆಟ್ಟಿಗರು ಹಾಗೂ ಕ್ರಿಕೆಟ್ ಫ್ಯಾನ್ಸ್ನಿಂದ ಟೀಂ ಇಂಡಿಯಾ ಕ್ಯಾಪ್ಟನ್ಗೆ ಸೋಷಿಯಲ್ ಮಿಡಿಯಾದಲ್ಲಿ ಶುಭಾಶಯಗಳ ಸುರಿಮಳೆಯೇ ಹರಿದಿದೆ. ಇದರ ಮಧ್ಯೆ ವಿಶೇಷವೆಂದರೆ ರೋಹಿತ್ ಅಭಿಮಾನಿಗಳು ರೋಹಿತ್ ಶರ್ಮಾ ಪತ್ನಿ ರಿತಿಕಾ aವರನ್ನ ಬಾಹುಬಲಿಯ ಶಿವಗಾಮಿ ದೇವಿಗೆ ಹೋಲಿಸಿ, ಮಗುವನ್ನ ಕೈಯಲ್ಲೆತ್ತಿ ತೋರಿಸುವ ರೀತಿ ಟ್ರೋಲ್ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. ಅಂದರೆ ರಿತಿಕಾ ಅವರಿಗೆ ಗಂಡು ಮಗುವಾಗಿದ್ದು, ಈ ಮಗನನ್ನ ಮರಿ ರೋಹಿತ್ ಗೆ ಹೋಲಿಸಿ ಪೋಸ್ಟ್ ಹಂಚಿಕೊಂಡಿದ್ದಾರೆ. ಈ ಫೋಟೋ ಈಗ ಸೋಶಿಯಲ್ಲಿ ಮೀಡಿಯಾದಲ್ಲಿ ವೈರಲ್ ಆಗಿದೆ.