ಕರ್ನಾಟಕ

ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಎಣಿಕೆ ಕಾರ್ಯ..ದಾಖಲೆ ಮೊತ್ತದ ಹಣ ಸಂಗ್ರಹ..!

ಮಲೆಮಹದೇಶ್ವರ ಬೆಟ್ಟ ಮಾದಪ್ಪನ ಹುಂಡಿಯಲ್ಲಿ 2 ಕೋಟಿ ಹಣ, 30 ಗ್ರಾಂ ಚಿನ್ನ ಸಂಗ್ರಹವಾಗಿದೆ.

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಗುರುವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ  2,00,80,844 ಹಣ,‌ 30 ಗ್ರಾಂ ಚಿನ್ನ ಹಾಗೂ 1. ಕೆಜಿ 865 ಗ್ರಾಂ ಬೆಳ್ಳಿ ಸಂಗ್ರಹವಾಗಿದೆ.

ಸಾಲೂರು ಮಠದ ಶಾಂತಮಲ್ಲಿಕಾರ್ಜುನ ಸ್ವಾಮಿಗಳ ದಿವ್ಯ ಸಾನಿದ್ಯದೊಂದಿಗೆ ಮಲೆ ಮಹದೇಶ್ವರ ಬೆಟ್ಟದ ಪ್ರಾಧಿಕಾರದ ಕಾರ್ಯದರ್ಶಿ ರಘು ನೇತೃತ್ವದಲ್ಲಿ ಮಲೆ ಮಹದೇಶ್ವರ ಬೆಟ್ಟದ ಬಸ್‌ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಗುರುವಾರ  ಬೆಳಗ್ಗೆ  6.30 ಗಂಟೆಗೆ  ದೇವರ ಹುಂಡಿಗಳನ್ನು ತೆರೆಯಲಾಯಿತು. ಬಳಿಕ ಸಿಸಿಟಿವಿ ಕ್ಯಾಮೆರಾ ಕಣ್ಗಾವಲಿನಲ್ಲಿಹುಂಡಿ ಎಣಿಕೆ ಕಾರ್ಯ ಪ್ರಾರಂಭವಾಗಿ. ಎಣಿಕೆ ಕಾರ್ಯವು ಸಂಜೆ 6 ರವರೆಗೂ ಎಣಿಕೆ ಕಾರ್ಯ ನಡೆಯಿತು.