ಕನ್ನಡ ಮಾತ್ರವಲ್ಲದೆ ತೆಲುಗು ಚಿತ್ರರಂಗದಲ್ಲೂ ಹೆಜ್ಜೆ ಇಟ್ಟು ಮನ ಗೆದ್ದಿರುವ ನಟ ರಿಷಿ, ರೀಸೆಂಟ್ ಆಗಿ ರಾಮನ ಅವತಾರ ಸಿನಿಮಾ ಮೂಲಕ ಸುದ್ದಿ ಮಾಡಿದ್ದರು. ಇದೀಗ ರುದ್ರ ಗರುಡ ಪುರಾಣ ಚಿತ್ರದ ಮೂಲಕ ತೆರೆಗೆ ಬರೋಕ್ಕೆ ರೆಡಿಯಾಗಿದ್ದಾರೆ.
ಸದ್ಯ ಬಹುನಿರೀಕ್ಷಿತ ರುದ್ರ ಗರುಡ ಪುರಾಣ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಈ ಚಿತ್ರದ ಟೀಸರ್ ಬಿಡುಗಡೆ ಮಾಡಿ ವಿಶ್ ಮಾಡಿದ್ದಾರೆ. ನಿರ್ದೇಶಕ ಜೇಕಬ್ ವರ್ಗೀಸ್ ಕೂಡ ಚಿತ್ರತಂಡಕ್ಕೆ ಸಾಥ್ ಕೊಟ್ಟಿದ್ದಾರೆ.
ಅಂದಹಾಗೆ ಈ ಒಂದು ಸಿನಿಮಾದಲ್ಲಿ ಎರಡು ಉಪಕಥೆಗಳಿದ್ದು, 1955ರಲ್ಲಿ ನ್ಯೂಯಾರ್ಕ್ ನಿಂದ ಮಿಯಾನ್ ಸಿಟಿಗೆ ಹೊರಟಿದ್ದ ವಿಮಾನ ಮಿಸ್ ಆಗುತ್ತದೆ. ಇದಾದ ಮೂವತ್ತು ವರ್ಷಗಳ ನಂತರ ಮತ್ತೆ ಆ ವಿಮಾನ ವಾಪಸ್ ಬರುತ್ತದೆ ಅದು ಹೇಗೆ? ಅನ್ನೋದು ಒಂದು ಕಥೆಯಾದ್ರೆ, ಒಬ್ಬ ರಾಜನ ಇಡೀ ಭೂಮಂಡಲನೇ ಗೆಲ್ಲಬೇಕು ಅಂತ ಆಸೆಯಿಂದ ಏನೆಲ್ಲ ಆಗುತ್ತದೆ ಅನ್ನೋದು ಮತ್ತೊಂದು ಕಥೆ.
ನಮ್ಮ ಸುತ್ತಮುತ್ತ ನಡೆಯುವ ಅನೇಕ ಸಮಸ್ಯೆಗಳನ್ನಿಟ್ಟುಕೊಂಡು ನಿರ್ದೇಶಕ ನಂದೀಶ್ ಈ ಚಿತ್ರದ ಕಥೆ ಮಾಡಿದ್ದಾರೆ. ಇನ್ನು ನಾಯಕ ರಿಷಿ, ಪುನೀತ್ ರಾಜಕುಮಾರ್ ಅವರ ನಿರ್ಮಾಣದ "ಕವಲುದಾರಿ" ಚಿತ್ರದ ನಂತರ ಮತ್ತೊಮ್ಮೆ ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ರುದ್ರ ಅನ್ನು
ಚಿತ್ರದಲ್ಲಿ ವಿನೋದ್ ಅಲ್ವೇ , ಕೆ.ಎಸ್ ಶ್ರೀಧರ್, ಗಿರೀಶ್ ಶಿವಣ್ಣ, ಶಿವರಾಜ ಕೆ.ಆರ್ ಪೇಟೆ, ಮುಂತಾದವರಿದ್ದು, ಅಶ್ವಿನಿ ಆರ್ಟ್ಸ್ ಲಾಂಛನದಲ್ಲಿ ಅಶ್ವಿನಿ ಲೋಹಿತ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.