ಕರ್ನಾಟಕ

ಈ ಬಾರಿ ಬಿಜೆಪಿ ಗೆಲ್ಲಲಿದೆ; ಬಂಗಾರು ಹನುಮಂತು

ಸಂಡೂರು ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು ಈ ಬಾರಿ ಬಿಜೆಪಿ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸಂಡೂರು ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು ಈ ಬಾರಿ ಬಿಜೆಪಿ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮತ ಎಣಿಕೆ ಕೇಂದ್ರದ ಬಳಿ ಮಾತನಾಡಿದ ಅವರು, ಸಂಡೂರು ಕ್ಷೇತ್ರದ ಜನರು ಈ ಬಾರಿ ಬದಲಾವಣೆ ಬಯಸಿದ್ದಾರೆ. ಬಿಜೆಪಿ ನಾಯಕರು ಈ ಚುನಾವಣೆಯನ್ನು ಒಗ್ಗಟ್ಟಿನಿಂದ ಎದುರಿಸಿದ್ದೇವೆ. ಕಾಂಗ್ರೆಸ್ ಈ ಚುನಾವಣೆಯಲ್ಲಿ ಹಣದ ಹೊಳೆ ಹರಿಸಿದೆ. ಸಿಎಂ ಸಿದ್ದರಾಮಯ್ಯ ಮೂರು ದಿನ ಕ್ಷೇತ್ರದಲ್ಲಿ ವಾಸ್ತವ್ಯ ಹೂಡಿದ್ರು. 14 ವರ್ಷಗಳ ಬಳಿಕ ಜನಾರ್ಧನರೆಡ್ಡಿ ಜಿಲ್ಲೆಗೆ ಬಂದಿರುವುದು ನಮಗೆ ಅನುಕೂಲ ಆಗಿದೆ. ಜನಾರ್ಧನ ರೆಡ್ಡಿ ಶ್ರೀರಾಮುಲು ಕೆ.ಎಸ್ ದಿವಾಕರ್ ಸೇರಿ ರಾಜ್ಯ ನಾಯಕರು ಸಾಕಷ್ಟು ಪ್ರಚಾರ ಮಾಡಿದ್ದಾರೆ. ಹೀಗಾಗಿ ಈ ಬಾರಿ ಉಪಚುನಾವಣೆಯಲ್ಲಿ ಬಿಜೆಪಿ ಗೆಲ್ಲಲಿದೆ ಎಂದು ಹೇಳಿದ್ದಾರೆ.