ಬೆಳಗಾವಿ : ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಯ ನಡುವೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರನ್ನ ಸತೀಶ್ ಜಾರಕಿಹೊಳಿ ಭೇಟಿಯಾಗಿದ್ದಾರೆ. ಜಾರಕಿಹೊಳಿ ಹೈಕಮಾಂಡ್ ಭೇಟಿ ರಾಜ್ಯದ ಜನರಲ್ಲಿ ಭಾರಿ ಕುತುಹಲವನ್ನ ಕೆರಳಿಸಿದೆ.
ಖರ್ಗೆ-ಸತೀಶ್ ಜಾರಕಿಹೊಳಿ ರಾಜಕೀಯ ಮಾತುಕತೆ ಸಾಧ್ಯತೆ ಇದ್ದು, ಇತ್ತೀಚೆಗೆ ದಲಿತ ಸಚಿವರ ಸಭೆ ಬಳಿಕ ಸತೀಶ್ ಜಾರಕಿಹೊಳಿ ಖರ್ಗೆಯವರನ್ನ ಭೇಟಿಯಾಗಿದ್ದಾರೆ. ಸಚಿವ ಸತೀಶ್ ಜಾರಕಿಹೊಳಿ ನಡೆಯ ಬಗ್ಗೆ ನಾಯಕರಲ್ಲಿ ಕುತೂಹಲ ಹೆಚ್ಚಾಗಿದೆ.