ಕರ್ನಾಟಕ

ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಜೈಲುಪಾಲು..!

ಬೇಲೆಕೇರಿ ಬಂದರಿನಿಂದ ಅದಿರು ನಾಪತ್ತೆ ಪ್ರಕರಣದಲ್ಲಿ, ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರು ಜೈಲು ಸೇರಿದ್ದಾರೆ.

ಬೇಲೆಕೇರಿ ಬಂದರಿನಿಂದ ಅದಿರು ನಾಪತ್ತೆ ಪ್ರಕರಣದಲ್ಲಿ, ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರು ಜೈಲು ಸೇರಿದ್ದಾರೆ. 14 ವರ್ಷಗಳ ಬಳಿಕ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ತೀರ್ಪು ಹೊರ ಬಿದ್ದಿದೆ. ನ್ಯಾ. ಸಂತೋಷ್ ಗಜಾನನ ಭಟ್ ತೀರ್ಪು ನೀಡಿದ್ದು, ಸತೀಶ್ ಸೈಲ್ ಅವರ ಜೊತೆಗೆ ಬಂದರು ಅಧಿಕಾರಿ ಮಹೇಶ್ ಬಿಳಿಯೆ ಸೇರಿ, ಇನ್ನೂ ಹಲವರಿಗೆ ಜೈಲು ಶಿಕ್ಷೆ ವಿಧಿಸಲಾಗಿದೆ. 

ಅದಿರು ಕಳ್ಳತನದಲ್ಲಿ ಭಾಗಿಯಾದ ಆರೋಪಿಗಳನ್ನು ದೋಷಿಗಳು ಎಂದು ಪರಿಗಣಿಸಿ, ಶಿಕ್ಷೆ ನೀಡಲಾಗಿದೆ.