ಮೈಸೂರು : ಪ್ರವಾಸಕ್ಕೆ ಬಂದಿದ್ದ ಶಾಲಾ ಮಕ್ಕಳಿದ್ದ ಬಸ್ ಅಪಘಾತಕ್ಕೀಡಾಗಿದೆ. ಮೈಸೂರಿನ ಫೌಂಟೇನ್ ವೃತ್ತದ ಬಳಿ ಬಸ್ ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿ ಹೊಡೆದಿದೆ. ಪರಿಣಾಮ ಬಸ್ ನಲ್ಲಿದ್ದ 30 ಕ್ಕು ಹೆಚ್ಚು ಮಕ್ಕಳಲ್ಲಿ 10ಕ್ಕೂ ಹೆಚ್ಚು ಮಕ್ಕಳಿಗೆ ಗಾಯವಾಗಿದೆ.
ಗಾಯಾಳು ಮಕ್ಕಳಿಗೆ ಕೆ. ಆರ್. ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದ್ದು, ಘಟನಾ ಸ್ಥಳಕ್ಕೆ ಮೈಸೂರು ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬೆಳಗಾವಿಯ ಖಾನಾಪುರದ ಶಾಂತಿನಿಕೇತನ್ ಶಾಲೆ ಮಕ್ಕಳು ಪ್ರವಾಸಕ್ಕೆ ಬಂದಿದ್ದರು. ಇಂದು ಮೈಸೂರಿನ ಪ್ರವಾಸಿ ತಾಣಗಳನ್ನ ನೋಡಿಕೊಂಡು ತೆರಳುತ್ತಿದ್ದ ವೇಳೆ ಅವಘಡ ಸಂಭವಿಸಿದೆ. ಅದೃಷ್ಟವಶಾತ್ ಭಾರಿ ಅನಾಹುತವೊಂದು ತಪ್ಪಿದೆ.