ಕರ್ನಾಟಕ

ತಹಶೀಲ್ದಾರ್ ಕಚೇರಿಯಲ್ಲಿ SDA ಆತ್ಮಹತ್ಯೆ ಕೇಸ್..ಮೂವರ ವಿರುದ್ಧ ದೂರು..!

ಬೆಳಗಾವಿಯಲ್ಲಿ ಸಚಿವೆ ಹೆಬ್ಬಾಳ್ಕರ್ ಪಿಎ, ತಹಶೀಲ್ದಾರ್ ಹಾಗೂ ಮತ್ತೋರ್ವನ ವಿರುದ್ಧ ದೂರು ದಾಖಲಾಗಿದೆ.

ನಿನ್ನೆ ಬೆಳಗಾವಿಯ ತಹಶೀಲ್ದಾರ್ ಕಚೇರಿಯಲ್ಲಿ SDA ರುದ್ರೇಶ್ ಆತ್ಮಹತ್ಯೆ ಪ್ರಕರಣ ಸಂಬಂಧ ದೂರು ದಾಖಲಾಗಿದೆ. ತಹಶೀಲ್ದಾರ್ ಬಸವರಾಜ ನಾಗರಾಳ, ಲಕ್ಷ್ಮಿ ಹೆಬ್ಬಾಳ್ಕರ್ ಪಿಎ ಸೋಮು  ಹಾಗೂ ಸಹೋದ್ಯೋಗಿ ಅಶೋಕ ಕಬ್ಬಲಿಗೇರ್ ವಿರುದ್ಧ, ಖಡೇಬಜಾರ್ ಪೊಲೀಸ್ ಠಾಣೆಯಲ್ಲಿ, ಬಿಎನ್‌ಎಸ್ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲು

ತಾಯಿ ಮಲ್ಲವ್ವ ನೀಡಿದ ದೂರಿನ ಅನ್ವಯ ಕೇಸ್ ದಾಖಲಾಗಿದೆ. ನಿನ್ನೆ ಬೆಳಗ್ಗೆ ತಹಶೀಲ್ದಾರ್ ಕಚೇರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ರುದ್ರೇಶ್, ವಾಟ್ಸಾಪ್ ನಲ್ಲಿ ನನ್ನ ಸಾವಿಗೆ ಮೂರು ಜನ ಕಾರಣ ಎಂದು ಬರೆದಿದ್ರು.