ಮಂಡ್ಯ : ಜಿಲ್ಲೆಯ ಮೇಲುಕೋಟೆಯಲ್ಲಿ ಸರಣಿ ಕಳ್ಳತನ ನಡೆಯುತ್ತಿದ್ದು, ತಡರಾತ್ರಿ ಮನೆಯ ಬೀಗ ಮುರಿದು ಕಳ್ಳತನ ಮಾಡಿದ್ದಾರೆ. ಈ ಘಟನೆ ಮೇಲುಕೋಟೆ ಒಕ್ಕಲಿಗರ ಬೀದಿಯಲ್ಲಿ ನಡೆದಿದೆ. ಒಕ್ಕಲಿಗರ ಬೀದಿಯಲ್ಲಿ ಬೀಗ ಹಾಕಿದ್ದ ಮನೆಗಳನ್ನೇ ಗುರುತಿಸಿ ಕಳ್ಳತನಕ್ಕೆ ಇಳಿದಿದ್ದಾರೆ.

ಕಳ್ಳರು ಸುಮಾರು 10ಕ್ಕೂ ಹೆಚ್ಚು ಮನೆಗಳಿಗೆ ನುಗ್ಗಿದ್ದು, ಮನೆಯಲ್ಲಿದ್ದ ಚಿನ್ನಾಭರಣ ಹಾಗೂ ಹಣ ದೋಚಿ ಖದೀಮರು ಪರಾರಿಯಾಗಿದ್ದಾರೆ. ಘಟನೆ ಸಂಬಂಧ ಸ್ಥಳಕ್ಕೆ ಮೇಲುಕೋಟೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ, ಮೇಲುಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.